Tuesday, May 7, 2024
Homeರಾಷ್ಟ್ರೀಯಮೋದಿ-ಸುನಕ್ ದೂರವಾಣಿ ಸಂಭಾಷಣೆ

ಮೋದಿ-ಸುನಕ್ ದೂರವಾಣಿ ಸಂಭಾಷಣೆ

ನವದೆಹಲಿ,ನ.4- ಇಸ್ರೇಲ್-ಹಮಾಸ್ ಯುದ್ಧ ಹಾಗೂ ಪಶ್ಚಿಮ ಏಷ್ಯಾ ಅಭಿವೃದ್ಧಿ ಕುರಿತಂತೆ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಸಂಭಾಷಣೆ ಸಂದರ್ಭದಲ್ಲಿ ಪಶ್ಚಿಮ ಏಷ್ಯಾದ ಅಭಿವೃದ್ಧಿ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಬಗ್ಗೆ ಚರ್ಚಿಸಿದರು ಮತ್ತು ಭಯೋತ್ಪಾದನೆ, ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಉಭಯ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಅವರು, ಪ್ರಾದೇಶಿಕ ಶಾಂತಿ, ಭದ್ರತೆ, ಸ್ಥಿರತೆ ಮತ್ತು ನಿರಂತರ ಮಾನವೀಯ ನೆರವಿನ ಅಗತ್ಯವನ್ನು ಒಪ್ಪಿಕೊಂಡರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುನಕ್ ಅವರು ಅಧಿಕಾರದಲ್ಲಿ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಮೋದಿ ಅಭಿನಂದಿಸಿದರು ಮತ್ತು ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಆರಂಭಿಕ ತೀರ್ಮಾನಕ್ಕೆ ಪ್ರಗತಿಯನ್ನು ಅವರು ಸ್ವಾಗತಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ : ಔಷಧ ಕಂಪನಿಯಲ್ಲಿ ಬೆಂಕಿ, ಏಳು ಮಂದಿ ನಾಪತ್ತೆ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಮಾತನಾಡಿದ್ದೇನೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಮೋದಿ ಎಕ್ಸ್ ಮಾಡಿದ್ದಾರೆ. ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಶುಭಾಶಯ ವಿನಿಮಯ ಮಾಡಿಕೊಂಡರು.

RELATED ARTICLES

Latest News