ನವದೆಹಲಿ,ಅ. 5 (ಪಿಟಿಐ) ತೊಂಬತ್ತು ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಹರಿಯಾಣದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.
ಪ್ರಜಾಪ್ರಭುತ್ವದ ಈ ಪವಿತ್ರ ಉತ್ಸವದ ಭಾಗವಾಗಲು ಮತ್ತು ಹೊಸ ಮತದಾನದ ದಾಖಲೆಯನ್ನು ರಚಿಸಲು ನಾನು ಎಲ್ಲ ಮತದಾರರಿಗೆ ಮನವಿ ಮಾಡುತ್ತೇನೆ ಎಂದು ಮೋದಿ ಎಕ್‌್ಸ ನಲ್ಲಿ ಪೋಸ್ಟ್ ಮಾಡಿದ್ದು, ತಮ ಮತದಾನದ ಹಕ್ಕನ್ನು ಮೊದಲ ಬಾರಿಗೆ ಬಳಸುತ್ತಿರುವ ಯುವ ಮತದಾರರಿಗೆ ಶುಭ ಹಾರೈಸಿದ್ದಾರೆ.
ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಭೂಪಿಂದರ್ ಸಿಂಗ್ ಹೂಡಾ ಮತ್ತು ಕಾಂಗ್ರೆಸ್‌ನ ವಿನೇಶ್ ಫೋಗಟ್, ಜೆಜೆಪಿಯ ದುಷ್ಯಂತ್ ಚೌತಾಲಾ ಮತ್ತು ಇತರ 1,027 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದಿನ ಚುನಾವಣೆಯಲ್ಲಿ ನಿರ್ಧಾರವಾಗಲಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ, ಆದರೆ ಕಾಂಗ್ರೆಸ್ 10 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.