ಹೈದರಾಬಾದ್, ಮಾ. 5 (ಪಿಟಿಐ)- ಬಿಗಿ ಭದ್ರತೆಯ ನಡುವೆ ಇಲ್ಲಿನ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಮೋದಿಯವರಿಗೆ ದೇವಿಯ ಛಾಯಾಚಿತ್ರವನ್ನು ಉಡುಗೊರೆಯಾಗಿ ನೀಡಿದರು. ನಿನ್ನೆ ರಾತ್ರಿ ಇಲ್ಲಿನ ರಾಜಭವನದಲ್ಲಿ ತಂಗಿದ್ದ ಮೋದಿ, ದೇವಸ್ಥಾನ ದರ್ಶನದ ನಂತರ ಸಂಗಾರೆಡ್ಡಿ ಜಿಲ್ಲೆಗೆ ತೆರಳಿದರು. 6,800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದು, ನಂತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.
ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಚಟುವಟಿಕೆಗಳನ್ನು ನವೀಕರಿಸಲು ಮತ್ತು ಹೆಚ್ಚಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಕಾರವು ಹೈದರಾಬಾದ್‍ನ ಬೇಗಂಪೇಟ್ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಿರುವ ನಾಗರಿಕ ವಿಮಾನಯಾನ ಸಂಶೋಧನಾ ಸಂಸ್ಥೆ (ಸಿಎಆರ್‍ಒ) ಕೇಂದ್ರವನ್ನು ಹೈದರಾಬಾದ್‍ನಲ್ಲಿ ಪ್ರಧಾನಿ ಉದ್ಘಾಟಿಸಿದರು.
350 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದಲ್ಲಿ ನಿರ್ಮಿಸಲಾದ ಈ ಅತ್ಯಾಧುನಿಕ ಸೌಲಭ್ಯವು 5-ಸ್ಟಾರ್-ಗೃಹ ರೇಟಿಂಗ್ ಮತ್ತು ಎನರ್ಜಿ ಕನ್ಸರ್ವೇಶನ್ ಬಿಲ್ಡಿಂಗ್ ಕೋಡ್ ಮಾನದಂಡಗಳಿಗೆ ಅನುಗುಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಅವರು ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಿದರು.