Monday, October 14, 2024
Homeರಾಷ್ಟ್ರೀಯ | Nationalತಲೈವಾ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

ತಲೈವಾ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

PM Modi wishes Rajinikanth speedy recovery

ಚೆನ್ನೈ, ಅ. 2 (ಪಿಟಿಐ) – ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ಶೀಘ್ರ ಚೇತರಿಕೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರ ಪತ್ನಿ ಲತಾ ಅವರೊಂದಿಗೆ ದೂರವಾಣಿ ಮೂಲಕ ರಜನಿ ಅವರ ಆರೋಗ್ಯ ವಿಚಾರಿಸಿದರು ಮತ್ತು ನಟ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ಎಕ್‌್ಸ ನಲ್ಲಿ ಪೋಸ್ಟ್‌ ಮಾಡಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ, ರಜನಿಕಾಂತ್‌ ಅವರ ಆರೋಗ್ಯ ವಿಚಾರಿಸಲು ಪ್ರಧಾನಿ ಮೋದಿ ಇಂದು ಲತಾ ರಜನಿಕಾಂತ್‌ ಅವರೊಂದಿಗೆ ಮಾತನಾಡಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ತಿರು ರಜನಿಕಾಂತ್‌ ಅವರ ಯೋಗಕ್ಷೇಮದ ಬಗ್ಗೆ ಪ್ರಧಾನಿಗೆ ತಿಳಿಸಲಾಯಿತು ಮತ್ತು ಪ್ರಧಾನಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

73 ವರ್ಷದ ನಟ ಪ್ರಸ್ತುತ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರ ಹದಯದ ಮುಖ್ಯ ರಕ್ತನಾಳದಲ್ಲಿನ ಸಮಸ್ಯೆಗೆ ಶಸ್ತ್ರಚಿಕಿತ್ಸೆಯಲ್ಲದ ಕಾರ್ಯವಿಧಾನದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ರಜನಿಕಾಂತ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗುವ ನಿರೀಕ್ಷೆ ಇದೆ

RELATED ARTICLES

Latest News