‘ಗತಿಶಕ್ತಿ’ಯಿಂದ ಬದಲಾಗಲಿದೆ ದೇಶದ ದಿಕ್ಕು: ಪ್ರಧಾನಿ ಮೋದಿ

Social Share

ನವದೆಹಲಿ, ಫೆ.28- ಉತ್ತಮ ಸಮನ್ವಯ ಮತ್ತು ಮೇಲ್ವಿಚಾರಣೆಯ ಮೂಲಕ ದೇಶದಲ್ಲಿ ಆಧುನಿಕ ಮೂಲಸೌಕರ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ಗತಿ ಶಕ್ತಿ ಉಪಕ್ರಮವು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಯೋಜನೆ ಕುರಿತು ಉದ್ಯಮ ಮತ್ತು ಆಂತರಿಕ ವ್ಯಾಪಾರದ ಮಧ್ಯಸ್ಥಗಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಸಗಿ ವಲಯವನ್ನು ಸರ್ಕಾರದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಲು ಮತ್ತು ಹೂಡಿಕೆಗಳನ್ನು ಹೆಚ್ಚಿಸಲು ಪ್ರಧಾನಮಂತ್ರಿ ಗತಿ ಶಕ್ತಿ ನೆರವಾಗಲಿದೆ.
ಗತಿಶಕಕ್ತಿ ರಾಷ್ಟ್ರೀಯ ಯೋಜನೆಯನ್ನು ಕಳೆದ ವರ್ಷ ಘೋಷಿಸಲಾಗಿದ್ದು, ಇಲಾಖೆಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ. ಬಹು-ಮಾದರಿ ಮತ್ತು ಕೊನೆಯ-ಮೈಲಿ ಸಂಪರ್ಕಗಳ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಹೆಚ್ಚು ಸಮಗ್ರ ಯೋಜನೆ ಮತ್ತು ಯೋಜನೆಗಳ ಅನುಷ್ಠಾನವನ್ನು ಜಾರಿಗೆ ತರಲಾಗುತ್ತಿದೆ.
ಇದು ಸರಕು ಸಾಗಣಿಕೆ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.ಹೆದ್ದಾರಿಗಳು, ಆಪ್ಟಿಕಲ್ ಫೈಬರ್ ಸಂಪರ್ಕ ಮತ್ತು ನವೀಕರಿಸಬಹುದಾದ ಇಂಧನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸರ್ಕಾರ ಹೂಡಿಕೆಗಳನ್ನು ಹೆಚ್ಚಿಸಿದೆ.
ಈಶಾನ್ಯ ಪ್ರದೇಶದ ಸಮತೋಲಿತ ಅಭಿವೃದ್ಧಿಗೆ ಬದ್ಧವಾಗಿದೆ. ರಫ್ತುಗಳನ್ನು ಹೆಚ್ಚಿಸಲು ಮತ್ತು ಎಂಎಸ್‍ಎಂಇಗಳನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸಲು ಗತಿಶಕ್ತಿ ಸಹಾಯ ಮಾಡುತ್ತದೆ ಎಂದು ಹೇಳಿದರು.

Articles You Might Like

Share This Article