ಕಲ್ಯಾಣ ಕರ್ನಾಟಕದಲ್ಲಿ ನಮೋ ಸಂಚಲನ

Social Share

ಕಲಬುರಗಿ,ಜ.19-ವಿವಿಧ ಅಭಿವೃದ್ಧಿ ಕಾಮ ಗಾರಿಗಳ ಉದ್ಘಾಟನೆ ಹಾಗೂ ಲಂಬಾಣಿ ತಾಂಡಗಳ ನಿವಾಸಿಗಳಿಗೆ ಖಾಯಂ ಹಕ್ಕು ಪತ್ರ ವಿತರಣೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಒಂದು ದಿನ ಭೇಟಿ ಆಡಳಿತಾರೂಢ ಬಿಜೆಪಿಯಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ.

ಕೇವಲ ಒಂದೇ ವಾರದ ಅವಧಿಯಲ್ಲಿ ರಾಜ್ಯಕ್ಕೆ ಎರಡು ಬಾರಿ ಆಗಮಿಸಿದ ಮೋದಿ ಅವರು ಅಭಿವೃದ್ಧಿ ಮಂತ್ರ ಜಪಿಸುವ ಮೂಲಕ ಪರೋಕ್ಷವಾಗಿ ವಿಧಾನಸಭೆ ಚುನಾವಣಾ ಕಹಳೆ ಮೊಳಗಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರೂರು ಕಲಬುರಗಿಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸುವ ಗುರಿಯೊಂದಿಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿರುವುದು ಇಂದಿನ ಕಾರ್ಯಕ್ರಮದ ಮೂಲಕ ರುಜುವಾತಾಗಿದೆ.

ಬೆಳಗ್ಗೆ 11 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಿಂದ ಕಲಬುರಗಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ಸಚಿವರಾದ ಆರ್.ಅಶೋಕ್, ಮುರುಗೇಶ್ ನಿರಾಣಿ, ಪ್ರಭುಚವ್ಹಾಣ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ಕಲಬುರಗಿಯಿಂದ ಯಾದಗಿರಿ ಜಿಲ್ಲೆಯ ಕೊಡೆಕಲ್‍ಗೆ ಆಮಿಸಿದ ಮೋದಿ ಅವರು ಬಹು ನಿರೀಕ್ಷಿತ ನೀರಾವರಿ ಯೋಜನೆಗೆ ಚಾಲನೆಕೊಟ್ಟರು. ಒಟ್ಟು 10,500 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಮೋದಿ ಅವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಸ್ಕಾಡಾ ತಂತ್ರಜ್ಞಾನದ ಮೂಲಕ ನಿರ್ಮಿಸಿರುವ ನಾರಾಯಣಪುರ ಎಡದಂಡೆ ಯೋಜನೆಯನ್ನು ಲೋಕಾರ್ಪಣೆ ಮಾಡಿದರು.

ಈ ಯೋಜನೆಯಿಂದ ಸುಮಾರು 5.50 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸಲಿದ್ದು, ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಲಾಗಿದೆ. ಜಲಧಾರೆ ಯೋಜನೆ ಅಡಿಯಲ್ಲಿ 2004 ಕೋಟಿ ರೂ.ಗಳ ವೆಚ್ಚದಲ್ಲಿ ಬಹು ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಶಂಕು ಸ್ಥಾಪನೆ ಹಾಗೂ ಭಾರತ ಮಾಲಾ ಯೋಜನೆಯಡಿ ಅಂದಾಜು 2,000 ಕೋಟಿ ರೂ. ವೆಚ್ಚದಲ್ಲಿ ಸೂರತ್-ಚೆನ್ನೆ ೈ ಹೆದ್ದಾರಿ ನಿರ್ಮಾಣ (ನಿಂಬಾಳ ನಿಂದ ಸಿಂಗನೋಡಿಗೆ) 6 ಪಥ ಗ್ರೀನ್ ಫೀಲ್ಡ್ ಎಕ್ಸ್‍ಪ್ರೆಸ್ ವೇ ಕಾಮಗಾರಿಗೂ ಚಾಲನೆ ನೀಡಿದರು.

ಫೆ.27ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ಕೊಡೆಕಲ್‍ನಿಂದ ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮಕ್ಕೆ ಆಗಮಿಸಿದ ಮೋದಿ ಅವರು ಸುಮಾರು ಐದು ಜಿಲ್ಲೆಗಳ 51,900 ಫಲಾನುಭವಿಗಳಿಗೆ ಖಾಯಂ ಹಕ್ಕು ಪತ್ರ ವಿತರಣೆ ಮಾಡಿದರು.

ನೂತನವಾಗಿ ನಿರ್ಮಿಸಿದ್ದ ಲಂಬಾಣಿ ತಾಂಡಗಳನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿತ್ತು. ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ಬಾಗಲಕೋಟೆಯ ಸುಮಾರು 51,900 ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದರು.

ಇತ್ತೀಚಿನ ವರ್ಷಗಳಲ್ಲಿ ಇಷ್ಟು ದೊಡ್ಡ ಮೊತ್ತದಲ್ಲಿ ಏಕಕಾಲದಲ್ಲಿ ಸರ್ಕಾರದ ಯೋಜನೆಯನ್ನು ಪಡೆದ ಈ ಕಾರ್ಯಕ್ರಮ ಗಿನ್ನೀಸ್ ದಾಖಲೆಗೂ ಸೇರ್ಪಡೆಯಾಯಿತು. ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ವಿವಿಧ ಭಾಗಗಳಿಂದ ಆಗಮಿಸಿದ್ದರು. ಬೆಳಗ್ಗಿನಿಂದಲೇ ಜಿಲ್ಲೆಯ ಹಲವಾರು ಭಾಗಗಳಿಂದ ನಿರೀಕ್ಷೆಗೂ ಮೀರಿದ ಕಾರ್ಯಕರ್ತರು ಹಾಗೂ ಫಲಾನುಭವಿಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಭಾಗಿಯಾದ ಸಾರ್ವಜನಿಕರಿಗೆ ಫಲಾವ್, ಬಿಸಿಬೇಳೆಬಾತ್, ಪಾಯಸ, ವಡೆ ಸಿದ್ಧಪಡಿಸಲಾಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು.

ಚುನಾವಣೆ ಮೇಲೆ ಕಣ್ಣು:
ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈ ಭಾಗದಲ್ಲಿ ನಿರೀಕ್ಷಿತ ಸಾನಗಳನ್ನು ಗೆಲ್ಲಲ್ಲು ಸಾಧ್ಯವಾಗಿರಲಿಲ್ಲ. ಕಲ್ಯಾಣ ಕರ್ನಾಟಕದ ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ಕಲಬುರಗಿಯಲ್ಲಿ ಒಟ್ಟು 41 ವಿಧಾನಸಭಾ ಕ್ಷೇತ್ರಗಳಿದ್ದು, ಇದರಲ್ಲಿ ಬಿಜೆಪಿ 18 ಕ್ಷೇತ್ರಗಳನ್ನು ಗೆದ್ದಿತ್ತು.

ಈ ಬಾರಿ ಮಿಷನ್ 50 ಗುರಿ ಹಾಕಿಕೊಂಡಿರುವ ಬಿಜೆಪಿ ಹೆಚ್ಚುವರಿಯಾಗಿ ಬೀದರ್, ಬಾಗಲಕೋಟೆ, ವಿಜಯಪುರ ಜಿಲ್ಲೆಗಳನ್ನೊಳಗೊಂಡು ಒಟ್ಟು ಹೈದರಾಬಾದ್ ಕರ್ನಾಟಕದಲ್ಲಿ ಮೋದಿ ಮೂಲಕ ಹೆಚ್ಚಿನ ಸ್ಥಾನಗಳಿಸುವ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

ಅಧಿಕಾರಿಗಳು, ನೌಕರರ ವರ್ಗಾವಣೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ

2019ರ ಲೋಕಸಭೆ ಚುನಾವಣೆಯಲ್ಲಿ ಈ ಭಾಗದ ಎಲ್ಲಾ ಕ್ಷೇತ್ರಗಳನ್ನು ಬಿಜೆಪಿ ತನ್ನ ಬುಟ್ಟಿಗೆ ಹಾಕಿಕೊಂಡಿತು. ಇಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸ್ವಂತ ಬಲದ ಮೇಲೆ ಅಕಾರ ಹಿಡಿಯಬಹುದೆಂಬ ಬಿಜೆಪಿ ಕಾರ್ಯತಂತ್ರವಾಗಿದೆ.
ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಪರೋಕ್ಷವಾಗಿ ಚುನಾವಣೆಗೆ ಅಖಾಡ ಸಿದ್ಧಪಡಿಸಲಿದೆ.

PM Narendra Modi, Karnataka,

Articles You Might Like

Share This Article