ರಿಷಿ ಸುನಕ್‍ ಮತ್ತು ಮೋದಿ ಮೊದಲ ಭೇಟಿ

Social Share

ಬಾಲಿ,ನ.15- ಇಂಡೋನೆಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರಮೋದಿ, ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರಿಗೆ ಶುಭ ಹಾರೈಸಿದ್ದಾರೆ. ಶೃಂಗಸಭೆಯ ಮೊದಲ ದಿನವೇ ಉಭಯ ನಾಯಕರು ಪರಸ್ಪರ ಭೇಟಿಯಾಗಿದ್ದು, ಮೋದಿಯವರು ರಿಷಿ ಸುನಕ್‍ರನ್ನು ಅಭಿನಂದಿಸಿದ್ದಾರೆ.

ಭಾರತದ ಸಂಜಾತ ಹಾಗೂ ಇನ್ಪೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಇತ್ತೀಚೆಗೆ ಇಂಗ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರಿಗೆ ಇದು ಮೊದಲ ಅಂತಾರಾಷ್ಟ್ರೀಯ ಸಮ್ಮೇಳನವಾಗಿದೆ.

ಪ್ರಧಾನಿ ನರೇಂದ್ರಮೋದಿ ಇಂದು ಎಂಟು ರಾಷ್ಟ್ರಗಳ ಪ್ರಮುಖರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ. ಡಿಜಿಟಲ್ ಪರಿವರ್ತನೆ ಸಮಾವೇಶದಲ್ಲಿ ಪಾಲ್ಗೊಳ್ಳುವ ಪ್ರಧಾನಿ ಮೋದಿ ನಂತರ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತಹ ಅಧಿವೇಶನದಲ್ಲೂ ಭಾಗವಹಿಸಲಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷ ಕುರಿತು ಜಿ-20 ಸಮ್ಮೇಳನದಲ್ಲಿ ಮೋದಿ ಪ್ರಸ್ತಾಪ

ಬಾಲಿಯಲ್ಲಿ ನೆಲೆಸಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಇಂಡೋನೇಷ್ಯಾದಲ್ಲಿ ಪ್ರವಾಸಿ ತಾಣವೆಂದು ಗುರುತಿಸಲಾದ ಮ್ಯಾನ್‍ಗ್ರೌವ್ ಅರಣ್ಯ ಪ್ರದೇಶಕ್ಕೆ ಕೆಲ ನಾಯಕರ ಜೊತೆ ತೆರಳುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಗಮನಸೆಳೆಯುವ ಈ ಸಮ್ಮೇಳನದಲ್ಲಿ ಹಲವು ಒಪ್ಪಂದಗಳಾಗುವ ಸಾಧ್ಯತೆಗಳಿವೆ.

ಚೀನಾದೊಂದಿಗೆ ಯಾವುದೇ ಶೀತಲ ಸಮರ ಇಲ್ಲ : ಬಿಡೆನ್

Articles You Might Like

Share This Article