ಕೊರೊನಾ ಕೋಲಾಹಲ, ಇಂದು ಪಿಎಂ ಜತೆ ಸಿಎಂಗಳ ಮಹತ್ವದ ಮೀಟಿಂಗ್

Social Share

ಬೆಂಗಳೂರು,ಜ.13-ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮಿತಿ ಮೀರಿದೆ. ದೈನಂದಿನ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆ 2 ಲಕ್ಷದ ಸನ್ನಿಹಿತಕ್ಕೆ ಬರುತ್ತಿರುವ ಹಿನ್ನೆಲೆ ಸಂಜೆ 4.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವರಾದ ಆರಗ ಜ್ಞಾನೇಂದ್ರ, ಡಾ.ಕೆ.ಸುಧಾಕರ್, ಆರ್.ಅಶೋಕ್, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಜೊತೆ ಪ್ರಮುಖ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ಕಾರ ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತಾಗಿ ಪ್ರಧಾನಿಯವರಿಂದ ಸಲಹೆ ಪಡೆಯಲಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿಸುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು ಪ್ರಕರಣಗಳ ಕುರಿತು ಶೇ.75ರಷ್ಟು ಸೋಂಕು ನಗರವೊಂದರಲ್ಲೇ ಬರುತ್ತಿದೆ. ಹೀಗಾಗಿ ಮುಂದೆ ಈ ಸೋಂಕು ತಡೆಗಟ್ಟಲು ಯಾವೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಪ್ರಧಾನಿ ಸಲಹೆ ನೀಡುವ ಸಾಧ್ಯತೆ ಇದೆ.
ಈಗಾಗಲೇ ರಾಜ್ಯದಲ್ಲಿ ವೀಕೆಂಡ್ ಕಫ್ರ್ಯೂ ಜತೆಗೆ ರಾತ್ರಿ 10ರಿಂದ ಮುಂಜಾನೆ 5 ಗಂಟೆವರೆಗೆ ಕಫ್ರ್ಯೂ ವಿಸಿರುವುದು, ಶಾಲಾ-ಕಾಲೇಜುಗಳನ್ನು ಕೆಲವು ಕಡೆ ಬಂದ್ ಮಾಡಿಸಿರುವುದ, ಕೋವಿಡ್ ಸೋಂಕಿತರಿಗೆ ಐಸಿಯು ಬೆಡ್, ಸಾಮಾನ್ಯ ಬೆಡ್‍ಗಳು, ಔಷಧಿಗಳು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುತ್ತಿರುವುದು ಸೇರಿದಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವರು.
ಇಂದು ನಡೆಯಲಿರುವ ಸಭೆಯು ಅತ್ಯಂತ ಮಹತ್ವ ಪಡೆದಿದ್ದು, ಪ್ರಧಾನಿ ಸರ್ಕಾರಕ್ಕೆ ಯಾವ ನಿರ್ದೇಶನ ನೀಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Articles You Might Like

Share This Article