ನವದೆಹಲಿ,ಜು.22- ಕೆಲವು ಪಕ್ಷಗಳು ತಮ್ಮ ವೈಫಲ್ಯಗಳನ್ನು ಮರೆಮಾಚಲು ಸಂಸತ್ತಿನ ಸಮಯವನ್ನು ಬಳಸಿಕೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು. ಸಂಸತ್ತಿನ ಮುಂಗಾರು ಅಧಿವೇಶನದ ಆರಂಭದಲ್ಲಿ ಹಿಂದಿನ ಸಂಸತ್ತಿನ ಅಧಿವೇಶನಗಳನ್ನು ಅಡ್ಡಿಪಡಿಸಿದ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು ಮತ್ತು ಮುಂದಿನ ಐದು ವರ್ಷಗಳ ಕಾಲ ದೇಶಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಹೋರಾಡುವಂತೆ ಅವರು ಮನವಿ ಮಾಡಿಕೊಂಡರು.
ನವದೆಹಲಿಯಲ್ಲಿ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಕೆಲವು ಪಕ್ಷಗಳು ತಮ್ಮ ವೈಫಲ್ಯಗಳನ್ನು ಮರೆಮಾಚಲು ಸಂಸತ್ತಿನ ಸಮಯವನ್ನು ಬಳಸಿಕೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು. ಕಳೆದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತಮ್ಮನ್ನು ಸಂಸತ್ತಿನಲ್ಲಿ ಮಾತನಾಡಲು ಬಿಡದಂತೆ ಪ್ರಯತ್ನಿಸಿದವು ಎಂದು ಆರೋಪಿಸಿದ ಮೋದಿ, ಇಂತಹ ತಂತ್ರಕ್ಕೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಜನರು ತೀರ್ಪು ನೀಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ದೇಶಕ್ಕಾಗಿ ಒಟ್ಟಾಗಿ ಹೋರಾಡುವಂತೆ ನಾನು ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಅಧಿವೇಶನದ ಆರಂಭದಲ್ಲಿ ಸಾಂಪ್ರದಾಯಿಕ ಭಾಷಣದಲ್ಲಿ ಹೇಳಿದರು.
ಇಂದು ಸಾವನ್‍ನ ಮೊದಲ ಸೋಮವಾರ. ಈ ಶುಭ ದಿನದಂದು ಮಹತ್ವದ ಅಧಿವೇಶನ ಪ್ರಾರಂಭವಾಗುತ್ತಿದೆ. ಸಾವನ್ ಮೊದಲ ಸೋಮವಾರದಂದು ನಾನು ದೇಶವಾಸಿಗಳಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗುತ್ತಿದೆ. ಇಂದು ಇಡೀ ದೇಶವು ಅದರತ್ತ ನೋಡುತ್ತಿದೆ. ಇದು ಸಕಾರಾತ್ಮಕ ಅ„ವೇಶನವಾಗಬೇಕು ಎಂದು ಮೋದಿ ಹೇಳಿದರು.