ಸರಣಿ ಭೇಟಿ ಮೂಲಕ ರಾಜ್ಯದಲ್ಲಿ ಬಿಜೆಪಿ ಅಲೆ ಎಬ್ಬಿಸಿದ ಪ್ರಧಾನಿ ಮೋದಿ

Social Share

ಬೆಂಗಳೂರು,ಫೆ.6-ಬರಲಿರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರಮೋದಿ ಅವರು ಇಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯನ್ನು ಎಬ್ಬಿಸಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಸೇರಿದಂತೆ ಹಳೇ ಮೈಸೂರು ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಮೋದಿ ಅವರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಕೊಡುವ ಮೂಲಕ ಬಿಜೆಪಿಯ ವಾತಾವರಣ ಸೃಷ್ಟಿಸಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿಂದು ನಡೆದ ಇಂಧನ ಸಪ್ತಾಹ ಹಾಗೂ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಬಿದರಹಳ್ಳಿಕಾವಲ್‍ನಲ್ಲಿ ಎಚ್‍ಎಎಲ್ ಘಟಕ ಲೋಕಾರ್ಪಣೆ, ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗಳನ್ನು ಉದ್ಘಾಟಿಸಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.

ಬೆಳಗ್ಗೆ ನವದೆಹಲಿಯಿಂದ 11 ಗಂಟೆಗೆ ಸರಿಯಾಗಿ ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ಶಿಷ್ಟಾಚಾರದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಹಲವು ಸಹೋದ್ಯೋಗಿಗಳು ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ಭಾರತದಲ್ಲಿ ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಿ : ಮೋದಿ ಕರೆ

ಇಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನದ ಕೇಂದ್ರದಲ್ಲಿ ಇಂಧನ ಸಪ್ತಾಹವನ್ನು ಉದ್ಘಾಟಿಸಿ ಭಾರತ ಇಂಧನ ಕ್ಷೇತ್ರದಲ್ಲಿ ಸಾಸಿರುವ ಸಾಧನೆಗಳು ಹಾಗೂ ಮುಂದಿರುವ ಸವಾಲುಗಳ ಬಗ್ಗೆ ಬೆಳಕು ಚೆಲ್ಲಿದರು.

ಇದೇ ಸಂದರ್ಭದಲ್ಲಿ ಮೋದಿ ಅವರು ದೇಶ-ವಿದೇಶಗಳಿಂದ ಆಗಮಿಸಿದ ವಿವಿಧ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣಾಕಾರಿಗಳು ಸೇರಿದಂತೆ ಮತ್ತಿತರರ ಜೊತೆ ಸಂವಾದವನ್ನು ನಡೆಸಿ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡುವಂತೆ ಮನವಿ ಮಾಡಿದರು.

ಭಾರತ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಬೇಕು. ಉತ್ತಮ ಗುಣಮಟ್ಟದ ವಿದ್ಯುತ್ ಉತ್ಪಾದನೆ ಹಾಗೂ ವಿದೇಶಕ್ಕೂ ವಿದ್ಯುತ್ ರಫ್ತು ಮಾಡುವ ಹಂತಕ್ಕೆ ತಲುಪಬೇಕು ಎಂದು ನೆರೆದಿದ್ದವರಿಗೆ ಮನವರಿಕೆ ಮಾಡಿಕೊಟ್ಟರು.
2030ಕ್ಕೆ ಭಾರತ ಪೆಟ್ರೋಲ್ ಮತ್ತು ಡೀಸೆಲ್ ಅವಲಂಬನೆಯಾಗದೆ ಎಥನಾಲ್ ಬಳಕೆಗೆ ಹೆಚ್ಚು ಒತ್ತು ಕೊಡಬೇಕು. 2025ರ ವೇಳೆಗೆ ಶೇ.20 ರಷ್ಟು ಎಥನಾಲ್ ಮಿಶ್ರಣ ಮಾಡುವ ಗುರಿ ಹೊಂದಲಾಗಿದೆ ಮತ್ತು ಇದರ ಪ್ರಗತಿಗಾಗಿ ತೈಲ ಮಾರುಕಟ್ಟೆ ಕಂಪೆನಿಗಳು 2ಜಿ-3ಜಿ ಎಥನಾಲ್ ಘಟಕಗಳು ಪ್ರಾರಂಭವಾಗಲಿದೆ.

ನಂತರ ಮೋದಿಯವರು ಹಸಿರು ಸಾಗಣೆ ಜಾಥಾಗೆ ಚಾಲನೆ ನೀಡಿದರು. ಬಳಿಕ ಶೀಶೆ ರಹಿತ ಉಪಕ್ರಮದಡಿ ಸಮವಸ್ತ್ರಗಳನ್ನು ಬಿಡುಗಡೆ ಮಾಡಿದರು. ಇದಾದ ನಂತರ ಭಾರತೀಯ ತೈಲ ನಿಮಗದ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಅವಳಿ ಕುಕ್‍ಟಾಪ್ ಮಾದರಿಯನ್ನು ಲೋಕಾರ್ಪಣೆ ಮಾಡಿದರು.

ಇದು ಕ್ರಾಂತಿಕಾರಿ ಒಳಾಂಗಣ ಸೌರ ಅಡುಗೆಗೆ ಪರಿಹಾರವಾಗಿದ್ದು, ಸೌರ ಮತ್ತು ಸಹಾಯಕ ಶಕ್ತಿ ಮೂಲಗಳೆರೆಡರಲ್ಲೂ ಏಕಕಾಲದಲ್ಲಿ ಕಾರ್ಯ ನಿರ್ವಹಿಸುತ್ತದೆ. ಭಾರತಕ್ಕೆ ಅಡುಗೆ ವಲಯದಲ್ಲಿ ಇದು ವಿಶ್ವಾಸಾರ್ಹ ಪರಿಹಾರವಾಗಿದೆ ಎಂದರು.

ಬೆಂಗಳೂರಿನ ಕಾರ್ಯಕ್ರಮಗಳನ್ನು ಮುಗಿಸಿದ ನಂತರ ಮೋದಿಯವರು ಕಲ್ಪತರು ನಾಡು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರಹಳ್ಳಿ ಕಾವಲ್‍ನಲ್ಲಿ ನಿರ್ಮಾಣ ಮಾಡಿರುವ ಎಚ್‍ಎಎಲ್ ಘಟಕವನ್ನು ಲೋಕಾರ್ಪಣೆ ಮಾಡಿದರು.

ಇದು ಹಸಿರು ವಲಯ ಸಮರ್ಪಿತ ಹೆಲಿಕಾಪ್ಟರ್ ಕಾರ್ಖಾನೆಯಾಗಿದ್ದು, ಇದರಿಂದ ಸಾಮಥ್ರ್ಯ ಹೆಚ್ಚಿಸಲಿದೆ ಮತ್ತು ಪರಿಸರ ಸ್ನೇಹಿ ಹೆಲಿಕಾಪ್ಟರ್‍ಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದು ಏಷ್ಯಾದಲ್ಲಿಯೇ ಅತಿ ದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯವಿರುವ ಕಾರ್ಖಾನೆಯಾಗಿದೆ.

ಇಟಲಿ, ಆಸ್ಟ್ರಿಯಾದಲ್ಲಿ ಹಿಮಕುಸಿತ, 9 ಮಂದಿ ಸಾವು

ಆರಂಭಿಕವಾಗಿ ಹಗುರ ಬಳಕೆಯ ಹೆಲಿಕಾಪ್ಟರ್‍ಗಳನ್ನು ಉತ್ಪಾದಿಸಲಾಗುತ್ತದೆ. ಎಲ್‍ಯುಹೆಚ್ ದೇಶೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ಶ್ರೇಣಿ, ಏಕ ಎಂಜಿನ್ ವಿವಿಧೋದ್ದೇಶ ಉಪಯುಕ್ತತೆಯ ಹೆಲಿಕಾಪ್ಟರ್ ಆಗಿದೆ.

ಈ ಕಾರ್ಖಾನೆಯಲ್ಲಿ ಲಘು ಯುದ್ಧ ಹೆಲಿಕಾಪ್ಟರ್ ಇತರೆ ಹೆಲಿಕಾಪ್ಟರ್‍ಗಳ ಉತ್ಪಾದನೆಯನ್ನು ಸಹ ವಿಸ್ತರಿಸಿದ್ದು ಮತ್ತು ಭಾರತೀಯ ಬಹುಪಾತ್ರದ ಹೆಲಿಕಾಪ್ಟರ್‍ಗಳು ಅಲ್ಲದೇ ದುರಸ್ತಿ ಮತ್ತು ಒಟ್ಟಾರೆ ಎಲ್‍ಸಿಹೆಚ್, ಎಲ್‍ಯುಹೆಚ್, ನಾಗರಿಕ ಎಎಲ್‍ಹೆಚ್ ಮತ್ತು ಐಎಂಆರ್‍ಹೆಚ್ ಹೆಲಿಕಾಪ್ಟರ್‍ಗಳನ್ನು ಭವಿಷ್ಯದಲ್ಲಿ ಉತ್ಪಾದಿಸಲಾಗುವುದು.

ದಿನಗಳಲ್ಲಿ ನಾಗರಿಕ ಎಲ್‍ಯುಹೆಚ್‍ಗಳನ್ನು ಉತ್ಪಾದಿಸುವ ಸಾಮಥ್ರ್ಯವನ್ನು ಈ ಕಾರ್ಖಾನೆ ಹೊಂದಿದೆ.
ಮುಂದಿನ 20 ವರ್ಷಗಳಲ್ಲಿ ಹೆಚ್‍ಎಎಲ್ ತುಮಕೂರಿನಲ್ಲಿ 3 ರಿಂದ 15 ಟನ್ ಸಾಮಥ್ರ್ಯದ 1,000 ಕ್ಕೂ ಹೆಚ್ಚು ಹೆಲಿಕಾಪ್ಟರ್‍ಗಳನ್ನು ಉತ್ಪಾದಿಸುವ ಗುರಿ ಹೊಂದಿದೆ. ಈ ವಲಯದಲ್ಲಿ 6,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರೆಯಲಿದ್ದು, ಈ ಮೂಲಕ ಉದ್ಯೋಗ ಕ್ರಾಂತಿಗೂ ಮೋದಿ ನಾಂದಿ ಹಾಡಿದರು.

ಬಳಿಕ ತುಮಕೂರು ಕೈಗಾರಿಕಾ ಪ್ರದೇಶ, ತುಮಕೂರಿನ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ್ ಜೀವನ್ ಅಭಿಯಾನದ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಪ್ರಧಾನಿಯವರು ತುಮಕೂರಿಗೆ ಆಗಮಿಸಿದ ಹಿನ್ನಲೆಯಲ್ಲಿ ಒಂದು ರೀತಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಕಾರ್ಯಕ್ರಮಕ್ಕೆ ಮೋದಿ ಅವರನ್ನು ಸ್ವಾಗತಿಸಿದರು.

ಇಟಲಿ, ಆಸ್ಟ್ರಿಯಾದಲ್ಲಿ ಹಿಮಕುಸಿತ, 9 ಮಂದಿ ಸಾವು

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಮಾಧುಸ್ವಾಮಿ, ಅರಗ ಜ್ಞಾನೇಂದ್ರ ಸೇರಿದಂತೆ ಸಂಸದರು, ಶಾಸಕರು ಮತ್ತಿತರರು ಉಪಸ್ಥಿತರಿದ್ದರು.

Articles You Might Like

Share This Article