ನ.3ರ ವರೆಗೆ ಮುರುಘಾಶರಣರ ನ್ಯಾಯಾಂಗ ಬಂಧನ ವಿಸ್ತರಣೆ

Social Share

ಚಿತ್ರದುರ್ಗ,ಅ.21-ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನವನ್ನು ನ.3ರವರೆಗೆ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನದ ಅವ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಜಿಲ್ಲಾ 2ನೇ ಅಪರ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ನ.3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮುರುಘಾ ಶ್ರೀ, 2ನೇ ಆರೋಪಿ ವಾರ್ಡನ್ ರಶ್ಮಿ ಹಾಗೂ ಇತರ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ಪ್ರಕರಣದ ನಡುವೆಯೇ ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೆ ಪೋಸ್ಕೋ ಕಾಯ್ದೆಯಡಿ ಎಫ್‍ಐಅರ್ ದಾಖಲಾಗಿರುವುದು ಕಾನೂನು ಕುಣಿಕೆಯನ್ನು ಮತ್ತಷ್ಟು ಬಿಗಿಗೊಳಿಸಿದೆ.
ಮಠದಲ್ಲಿದ್ದ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಲಾಗಿದೆ ಎಂದು ನೊಂದ ಪೋಷಕರು ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದರು.

ಶೇಮ್..ಶೇಮ್.. : ಬಿಬಿಎಂಪಿ ಇಂಜಿನಿಯರ್‌ಗಳಿಗೆ ಖಾಸಗಿಯವರಿಂದ ಕ್ಲಾಸ್

ಈ ದೂರಿನ ಮೇರೆಗೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್‍ಐಆರ್ ದಾಖಲಾಗಿದ್ದು, ಒಂದು ವೇಳೆ ಪ್ರಕರಣದಲ್ಲಿ ಜಾಮೀನು ದೊರೆತರೂ ಪುನಃ ಅವರಿಗೆ ಬಂಧನದ ಭೀತಿ ಎದುರಾಗಲಿದೆ.

Articles You Might Like

Share This Article