ಪೋಕ್ಸೊ ಪ್ರಕರಣ ; ಬಿಎಸ್‌‍ವೈ ಬಂಧನದ ಕುರಿತು ಗೃಹಸಚಿವ ಪರಮೇಶ್ವರ್‌ ಹೇಳಿದ್ದೇನು..?

ತುಮಕೂರು,ಜೂ.13- ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿಚಾರಣೆ ನಡೆಯಲಿದ್ದು, ಅಗತ್ಯವಿದ್ದರೆ ಬಂಧಿಸುವ ಬಗ್ಗೆ ಸಿಐಡಿ ಅಧಿಕಾರಿಗಳು ನಿರ್ಧರಿಸುತ್ತಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಗೆ ಇರುವ ಮಾಹಿತಿ ಪ್ರಕಾರ, ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟೀಸ್‌‍ ನೀಡಿದ್ದಾರೆ. ಅವರು ಬಂದು ತಮ ಹೇಳಿಕೆ ದಾಖಲಿಸಬೇಕಿದೆ ಎಂದರು.ಪ್ರಕರಣದಲ್ಲಿ 15ನೇ ತಾರೀಖಿನೊಳಗೆ ದೋಷಾರೋಪಣ ಪಟ್ಟಿ ಸಲ್ಲಿಸಬೇಕು. ಅದಕ್ಕೂ ಮುನ್ನ ಅಗತ್ಯವಿರುವ ಪ್ರಕ್ರಿಯೆಗಳನ್ನು ಪಾಲಿಸಬೇಕಾಗುತ್ತದೆ. … Continue reading ಪೋಕ್ಸೊ ಪ್ರಕರಣ ; ಬಿಎಸ್‌‍ವೈ ಬಂಧನದ ಕುರಿತು ಗೃಹಸಚಿವ ಪರಮೇಶ್ವರ್‌ ಹೇಳಿದ್ದೇನು..?