ಪೋಕ್ಸೋ ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಗಳ ಸ್ಥಾಪನೆ

Social Share

ಬೆಳಗಾವಿ, ಡಿ.26- ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೋಕ್ಸೋ ಕಾಯ್ದೆ ಅನ್ವಯ ದಾಖಲಿಸಿರುವ ಪ್ರಕರಣಗಳ ವಿಚಾರಣೆಯನ್ನು ನಡೆಸಲು ಈಗಾಗಲೇ ಪ್ರತಿ ಜಿಲ್ಲೆಗೊಂದರಂತೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್ತಿಗೆ ತಿಳಿಸಿದರು.

ಪ್ರಶ್ನೋತರ ವೇಳೆಯಲ್ಲಿ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೊಕ್ಸೋ ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪ್ರಕರಣಗಳಲ್ಲಿ ನೊಂದವರ ಪರವಾಗಿ ನ್ಯಾಯಾಲಯಗಳಲ್ಲಿ ಸಮರ್ಥವಾಗಿ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗಿರುತ್ತದೆ ಎಂದರು.

ಪೊಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಜಾಮೀನು ಸಿಗುವುದಿಲ್ಲ. ಬಿಡುಗಡೆಯಾಗುವುದು ಕಡಿಮೆ. ಶಿಕ್ಷೆ ಪ್ರಮಾಣ ಹೆಚ್ಚು. ಪರಿಚಿತರಿಂದ ಮಕ್ಕಳ ಮೇಲೆ ದೌರ್ಜನ್ಯ ನಡೆಯುವುದು ಹೆಚ್ಚಿದ್ದು, ಪೊಲೀಸ್ ಇಲಾಖೆಯಿಂದ ಸಾಮಾಜಿಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಶ್ರದ್ಧಾ ಹತ್ಯೆ ಬಳಿಕ ಹೆದರಿ ತುನಿಶಾಳಿಂದ ದೂರವಾಗಿದ್ದೆ : ಆರೋಪಿ ಹೇಳಿಕೆ

ಮಹಿಳಾ ಸಹಾಯವಾಣಿ, ಮಕ್ಕಳ ಸಹಾಯವಾಣಿ, ಸ್ಪಂದನಾ ಸಹಾಯವಾಣಿಗಳು ಕಾರ್ಯನಿರ್ವಹಿಸುತ್ತಿವೆ. ಪೊಲೀಸರ ಗಸ್ತು ಪ್ರಮಾಣ ಹೆಚ್ಚಿಸಲಾಗಿದೆ. ಎಫ್‍ಐಆರ್ ದಾಖಲಿಸಿದ ಬಳಿಕ ವಿಳಂಬ ಮಾಡದೇ
ಚಾರ್ಜ್‍ಶೀಟ್ ಸಲ್ಲಿಸಲು ಸೂಚಿಸಲಾಗಿದೆ.

ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಕೆಎಸ್‍ಆರ್ ಪಿಯಿಂದ ಕರಾಟೆ ಕಲಿಸಲಾಗುತ್ತಿದೆ. ಚೆನ್ನಮ ಪಡೆ, ಓಬವ್ವ ಪಡೆ, ಶರವಾತಿ ಪಡೆ ಹೆಸರಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ ಎಂಂದು ತಿಳಿಸಿದರು.

ಅಧಿವೇಶನ ಆರಂಭವಾಗಿ ವಾರಕಳೆದರೂ ನಿಲ್ಲದ ಸಾಲು ಸಾಲು ಪ್ರತಿಭಟನೆಗಳು

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ 2019- 20ನೇ ಸಾಲಿನಲ್ಲಿ 700 ಲಕ್ಷ ರೂ.ಗಳು ಮತ್ತು 2020-21 ರಲ್ಲಿ 100 ಲಕ್ಷಗಳ ಅನುದಾನವನ್ನು ನಿರ್ಭಯ ಯೋಜನೆಯಡಿ ಬಿಡುಗಡೆ ಮಾಡಿದ್ದು, ಸದರಿ ಅನುದಾನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ 800 ಪೊಲೀಸ್ ಠಾಣೆಗಳಲ್ಲಿ ಹೆಲ್ ಡೆಸ್ಕ್‍ಗಳನ್ನು ಸ್ಥಾಪಿಸಲಾಗಿದೆ. ಮುಂದುವರೆದು ಸದರಿ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 250 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

POCSO cases, special courts, district, minister Araga Jnanendra,

Articles You Might Like

Share This Article