Tuesday, May 20, 2025
Homeಜಿಲ್ಲಾ ಸುದ್ದಿಗಳು | District Newsಅಂಜಲಿ ಕೊಲೆ ಬಳಿಕ ಎಚ್ಚೆತ್ತ ಪೊಲೀಸರು : ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

ಅಂಜಲಿ ಕೊಲೆ ಬಳಿಕ ಎಚ್ಚೆತ್ತ ಪೊಲೀಸರು : ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

ಹುಬ್ಬಳ್ಳಿ, ಮೇ 27- ಯುವತಿ ಅಂಜಲಿ ಕೊಲೆ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಇಂದು ಬೆಳ್ಳಂಬೆಳ್ಳಗೆ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹತ್ತಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಬೆಂಡಿಗೇರಿ ಠಾಣೆ ಪೊಲೀಸರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡು ರೌಡಿಶೀಟರ್‌ಗಳಿಗೆ ಬಾಲಬಿಚ್ಚದಂತೆ ತಾಕೀತು ಮಾಡಿದ್ದಾರೆ.

ಬೆಂಡಿಗೇರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳ್ಳಂಬೆಳಗ್ಗೆ ರೌಡಿಗಳ ನಿದ್ದೆಗೆಡಿಸಿದ ಪೊಲೀಸರು ಮನೆಯನ್ನು ಪರಿಶೀಲಿಸಿ ಪ್ರಸ್ತುತ ಮಾಡುತ್ತಿರುವ ಉದ್ಯೋಗ, ಮೊಬೈಲ್‌ ನಂಬರ್‌, ವಾಸಸ್ಥಳದ ವಿಳಾಸ ಪಡೆದು ಎಚ್ಚರಿಕೆ ನೀಡಿದ್ದಾರೆ. ಬೆಂಡಿಗೇರಿ ಠಾಣೆ ಇನ್‌್ಸಪೆಕ್ಟರ್‌ ಮಾರುತಿಗುಳ್ಳಾರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

RELATED ARTICLES

Latest News