Friday, January 17, 2025
Homeಬೆಂಗಳೂರುಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕ ಖಾಕಿ ಬಲೆಗೆ

ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕ ಖಾಕಿ ಬಲೆಗೆ

ಬೆಂಗಳೂರು, ಅ.1- ಒಂಟಿಯಾಗಿ ಓಡಾಡುವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಯಾಲಿಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ತಮಿಳುನಾಡು ಮೂಲದವನಾದ ಈತ ವರ್ಕ್‍ಶಾಪ್‍ನಲ್ಲಿ ಕೆಲಸ ಮಾಡತ್ತಿದ್ದನು. ಈತ ಬೈಕ್‍ನಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಹೋಗುವ ಯುವತಿಯರನ್ನು ತಬ್ಬಿಕೊಂಡು ನಂತರ ಸ್ಥಳದಿಂದ ಪರಾರಿಯಾಗುತ್ತಿದ್ದನು.

ವಸಂತನಗರದಲ್ಲಿ ಇತ್ತೀಚೆಗೆ ರಾತ್ರಿ ವೇಳೆ ವಾಯು ವಿಹಾರ ಮಾಡುತ್ತಿದ್ದ ಯುವತಿಯನ್ನು ಕಂಡು ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿ ನಂತರ ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿ ಆಕೆಯನ್ನು ತಬ್ಬಿಕೊಂಡು ನಂತರ ಅಸಭ್ಯವಾಗಿ ವರ್ತಿಸಿದ್ದ. ಈತನ ವರ್ತನೆಯಿಂದ ಯುವತಿ ಕಿರುಚಿಕೊಳ್ಳುತ್ತಿದ್ದಂತೆ ಬೈಕ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದನು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆರೋಪಿಯು ವರ್ಕ್‍ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದು, ರಿಪೇರಿಗೆ ಬರುವ ಬೈಕನ್ನು ತೆಗೆದುಕೊಂಡು ಸುತ್ತಾಡುತ್ತಾ ಇದೇ ರೀತಿ ಅನೇಕ ಸಲ ಒಂಟಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ವಿಚಾರಣೆಯಿಂದ ಗೊತ್ತಾಗಿದೆ.

RELATED ARTICLES

Latest News