Sunday, April 28, 2024
Homeರಾಜ್ಯನಾಳೆ ಕಾನ್‍ಸ್ಟೆಬಲ್ ಲಿಖಿತ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಆದೇಶ

ನಾಳೆ ಕಾನ್‍ಸ್ಟೆಬಲ್ ಲಿಖಿತ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಆದೇಶ

ಕೆಜಿಎಫ್,ಫೆ.24 – ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಸಿವಿಲ್ ಕಾನ್‍ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಾಳೆ ನಡೆಯಲಿದೆ. ಅದರಂತೆ, ಕೆಜಿಎಫ್ ಪೊಲೀಸ್ ಜಿಲ್ಲೆಯ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಬೆಳಗ್ಗೆ 11 ರಿಂದ 12.30 ಗಂಟೆಯ ತನಕ ಸುಮಾರು 3000 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಅರ್ಹ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮೊಬೈಲ್ ಎಸ್‍ಎಂಎಸ್ ಮೂಲಕ ಮಾಹಿತಿ ಬರಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್‍ನಿಂದಲೂ ಕರೆಪತ್ರ ಡೌನ್‍ಲೋಡ್ ಸಹ ಮಾಡಿಕೊಳ್ಳಬಹುದು ಎಂದು ಪೊಲೀಸ್ ನೇಮಕಾತಿ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ. ಅಭ್ಯರ್ಥಿಗಳು ಶೂ ಧರಿಸಿ ಪರೀಕ್ಷಾ ಕೇಂದ್ರದೊಳಗೆ ಹೋಗುವುದನ್ನು ನಿಷೇಧಿಸಲಾಗಿದೆ. ವಸ್ತ್ರ ಸಂಹಿತೆ ನಿಯಮವನ್ನೂ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆ ಪಾಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ.

ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ, ಕಾಲುಂಗರ ಹೊರತುಪಡಿಸಿ ಲೋಹದ ಆಭರಣ ಧರಿಸದಂತೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಸಿವಿಲ್ ಕಾನ್‍ಸ್ಟೆಬಲ್ (ಪುರುಷ, ಮಹಿಳಾ, ತೃತೀಯ ಲಿಂಗ) ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಗ್ ಸೇರಿದಂತೆ 1137 ಹುದ್ದೆಗಳ ನೇಮಕಾತಿಗೆ ರಾಜ್ಯವ್ಯಾಪ್ತಿ ಪರೀಕ್ಷೆಯು ಏಕಕಾಲದಲ್ಲಿ ನಡೆಯಲಿದೆ.

RELATED ARTICLES

Latest News