Sunday, July 21, 2024
Homeಬೆಂಗಳೂರುವ್ಹೀಲಿಂಗ್ ಮಾಡುವ ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ವ್ಹೀಲಿಂಗ್ ಮಾಡುವ ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು,ಜು.10– ವ್ಹೀಲಿಂಗ್ ಪುಂಡರ ವಿರುದ್ಧ ಸಮರ ಸಾರಿರುವ ನಗರದ ಸಂಚಾರಿ ಠಾಣೆ ಪೊಲೀಸರು ದಿನನಿತ್ಯ ವೀಲಿಂಗ್ ಮಾಡುವವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲು ಮಾಡಿಕೊಂಡು ಬಿಸಿ ಮುಟ್ಟಿಸುತ್ತಿದ್ದಾರೆ.

ಹಲಸೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಸವಾರನೊಬ್ಬನನ್ನು ಪತ್ತೆ ಹಚ್ಚಿ ಆತನ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ.

ಸವಾರನನ್ನು ವಿಚಾರಣೆ ಗೊಳಪಡಿಸಿದ್ದು, ಆತ ವಯಸ್ಕನಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ನಗರದ ವಿವಿಧ ರಸ್ತೆಗಳಲ್ಲಿ ದಿನನಿತ್ಯ ವೀಲಿಂಗ್ ಮಾಡುವವರು ಕಂಡುಬರು ತ್ತಿದ್ದು, ಸಂಚಾರಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ವೀಲಿಂಗ್ ಮಾಡುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

RELATED ARTICLES

Latest News