ಕೊಡಗು : ಎಡಿಜಿಪಿ ನೇತೃತ್ವದಲ್ಲಿ ಪಥ ಸಂಚಲನ

Social Share

ಕೊಡಗು,ಆ.26- ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಇಂದು ಎಡಿಜಿಪಿ ಅಲೋಕ್‍ಕುಮಾರ್ ನೇತೃತ್ವದಲ್ಲಿ ಪೊಲೀಸರ ಪಥಸಂಚಲನ ನಡೆಸಿದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಮಡಿಕೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿಗೆ ಮೊಟ್ಟೆ ಎಸೆದು ದಾಂಧಲೆ ಸೃಷ್ಟಿಯಲಾಗಿತ್ತು.

ಜಿಲ್ಲೆಯ ಜನರ ಹಿತದೃಷ್ಟಿಯಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಗಲಾಟೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿ ನಿಷೇಧಾಜ್ಞೆ ಜಾರಿ ಮಾಡಿದೆ. ಈ ಅವಧಿಯಲ್ಲಿ ಸಭೆ, ಸಮಾರಂಭ, ಪ್ರತಿಭಟನೆ ಮಾಡದಂತೆ ನಿರ್ಬಂಧ ಹೇರಲಾಗಿದೆ. ಜಿಲ್ಲೆಯಲ್ಲಿ ಮೊಟ್ಟೆ ಕಾವು ಇನ್ನೂ ತಣ್ಣಗಾಗಿಲ್ಲ. ಎರಡೂ ಪಕ್ಷಗಳ ಒಳಜಗಳಕ್ಕೆ ಕೊಡಗಿನಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿರುವುದರಿಂದ ಇಂದು ಎಡಿಜಿಪಿ ಅಲೋಕ್‍ಕುಮಾರ್ ಅವರ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ನಗರಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ಸೂಕ್ಷ್ಮ ಪ್ರದೇಶಗಳಾದ ಕುಶಾಲನಗರ, ವಿರಾಜಪೇಟೆ, ಸೋಮವಾರ ಪೇಟೆ, ಪೊನ್ನಂಪೇಟೆ ಭಾಗದಲ್ಲಿ ಪಥಸಂಚಲನ ನಡೆಸಿ ಸ್ಥಳೀಯರಿಗೆ ಧೈರ್ಯ ತುಂಬಿದರು.

ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ: ಜಿಲ್ಲೆಯಲ್ಲಿನ ಒಟ್ಟು 20 ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲಿಯೇ 16 ಚೆಕ್‍ಪೋಸ್ಟ್ ನಿರ್ಮಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸಾವಿರಕ್ಕೂ ಹೆಚ್ಚು ಪೋಲೀಸರನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ.

Articles You Might Like

Share This Article