Tuesday, September 17, 2024
Homeಬೆಂಗಳೂರುಹೈ ಬೀಮ್‌ ಲೈಟ್‌ ಅಳವಡಿಸಿದ ವಾಹನಗಳ ವಿರುದ್ಧ ಮುಂದುವರೆದ ಪೊಲೀಸರ ಕಾರ್ಯಾಚರಣೆ

ಹೈ ಬೀಮ್‌ ಲೈಟ್‌ ಅಳವಡಿಸಿದ ವಾಹನಗಳ ವಿರುದ್ಧ ಮುಂದುವರೆದ ಪೊಲೀಸರ ಕಾರ್ಯಾಚರಣೆ

ಬೆಂಗಳೂರು, ಜು.14- ಹೈ ಬೀಮ್‌ ಲೈಟ್‌ಗಳನ್ನು ಅಳವಡಿಸಿಕೊಂಡು ವಾಹನ ಚಾಲನೆ ಮಾಡುವವರ ವಿರುದ್ಧ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ನೂರು ಪ್ರಕರಣಗಳನ್ನು ದಾಖಲಿಸಿಕೊಂಡು 50 ಸಾವಿರ ರೂ. ದಂಡ ಸಂಗ್ರಹಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ವಾಹನಗಳಲ್ಲಿ ಹೈ ಬೀಮ್‌ ಲೈಟ್‌್ಸ ಉಪಯೋಗಿಸುತ್ತಿದ್ದು, ಇದರಿಂದ ರಾತ್ರಿ ವೇಳೆ ರಸ್ತೆ ಅಪಘಾತಗಳು ಉಂಟಾಗುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ನಿನ್ನೆ ಕಾರ್ಯಾಚರಣೆ ಕೈಗೊಂಡಿದ್ದರು.

ಎಲ್ಲ ವಾಹನ ಚಾಲಕರು, ಸವಾರರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣನವರ್‌ ಮನವಿ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲೂ ಸಹ ಈ ವಿಶೇಷ ಕಾರ್ಯಾಚರಣೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News