ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಬೆಂಗಳೂರಿನ ಸ್ಪಾಗಳ ಮೇಲೆ ಪೊಲೀಸರ ದಾಳಿ

Social Share

ಬೆಂಗಳೂರು,ಫೆ.5- ಅಕ್ರಮ ಚಟುವಟಿಕೆ ನಡೆಸುತ್ತಿದ್ದ ನಗರದ ಮೂರು ಸ್ಪಾಗಳ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು ಹೊರದೇಶದ ಇಬ್ಬರು ಮಹಿಳೆಯರು ಸೇರಿದಂತೆ 13 ಮಂದಿಯನ್ನು ಸಂರಕ್ಷಿಸಿದ್ದಾರೆ. ನಗರದ ರಾಯಲ್ ಸ್ಪಾ ಮತ್ತು ಸಲೂನ್ ಅಸ್ತೆಟಿಕ್ ಯೂನಿಸೆಕ್ಸ್ ಸಲೂನ್ ಸ್ಪಾ ಹಾಗೂ ನಿಸರ್ಗ ಆಯುರ್ವೇದಿಕ್ ಕ್ಲಿನಿಕ್‍ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಈ ಮೂರು ಸ್ಪಾ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ಮಾಡಿದೆ.
ದಾಳಿ ವೇಳೆ ಹೊರದೇಶದ ಇಬ್ಬರು ಮಹಿಳೆಯರು ಸೇರಿದಂತೆ 13 ಮಹಿಳೆಯರನ್ನು ಸಂರಕ್ಷಿಸಲಾಗಿದೆ. ಈ ಪೈಕಿ ರಾಜ್ಯ, ಹೊರರಾಜ್ಯ ಹಾಗೂ ಹೊರ ದೇಶದ ಮಹಿಳೆಯರು ಇದ್ದಾರೆ.
ಅವರಲ್ಲಿ ನೇಪಾಳ, ಟರ್ಕಿ ದೇಶದ ಇಬ್ಬರು ಮಹಿಳೆಯರು, ನಾಗಾಲ್ಯಾಂಡ್ ಇಬ್ಬರು, ಅಸ್ಸಾಂನ ಮೂವರು ಮಹಿಳೆಯರು, ದೆಹಲಿಯ ಒಬ್ಬರು, ಪಶ್ಚಿಮ ಬಂಗಾಳದ ಮೂವರು ಹಾಗೂ ಸ್ಥಳೀಯ ಇಬ್ಬರು ಮಹಿಳೆಯರು ಇದ್ದಾರೆ. ಪ್ರಕರಣಗಳಿಗೆ ಸಂಬಂಸಿದಂತೆ 9 ಮಂದಿ ವಿರುದ್ಧ ಎಚ್‍ಎಸ್‍ಆರ್ ಲೇಔಟ್, ಅಶೋಕನಗರ ಹಾಗೂ ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಕಾರ್ಯಚರಣೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರ, ಕೇಂದ್ರ ಅಪರಾಧ ವಿಭಾಗದ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಹಾಗೂ ಸಿಬ್ಬಂದಿ ತಂಡ ಯಶಸ್ವಿಯಾಗಿ ಕೈಗೊಂಡಿರುತ್ತದೆ.

Articles You Might Like

Share This Article