Friday, July 25, 2025
Homeಜಿಲ್ಲಾ ಸುದ್ದಿಗಳು | District Newsವಿದ್ಯಾಕಾಶಿ ಧಾರವಾಡದಲ್ಲಿ ಬೆಳ್ಳಂ ಬೆಳಗ್ಗೆ ಪೊಲೀಸರ ರಿವಾಲ್ವರ್ ಸದ್ದು, ಇಬ್ಬರು ಕಳ್ಳರಿಗೆ ಗುಂಡೇಟು

ವಿದ್ಯಾಕಾಶಿ ಧಾರವಾಡದಲ್ಲಿ ಬೆಳ್ಳಂ ಬೆಳಗ್ಗೆ ಪೊಲೀಸರ ರಿವಾಲ್ವರ್ ಸದ್ದು, ಇಬ್ಬರು ಕಳ್ಳರಿಗೆ ಗುಂಡೇಟು

Police revolver fired in Dharwad, two thieves shot

ಧಾರವಾಡ,ಜು.24- ವಿದ್ಯಾಕಾಶಿ ಎಂದೇ ಹೆಸರಾಗಿರುವ ಧಾರವಾಡದಲ್ಲಿ ಬೆಳ್ಳಂ ಬೆಳಗ್ಗೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು ಇಬ್ಬರು ಕಳ್ಳರು ಗುಂಡೇಟಿನಿಂದ ಗಾಯಗೊಂಡಿದ್ದಾರೆ.
ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಜಾಮಿಲ್, ವಿಜಯ ಗುಂಡೇಟು ತಿಂದ ಆರೋಪಿಗಳು.

ಗಿರಿನಗರದ ಬಡಾವಣೆಯ ಮನೆಯೊಂದರಲ್ಲಿ ಈ ಇಬ್ಬರು ಕಳ್ಳತನ ಮಾಡಿಕೊಂಡು ಅಲ್ಲಿಂದ ಪರಾರಿಯಾಗುತ್ತಿದ್ದರು. ಆ ವೇಳೆ ಗಸ್ತಿನಲ್ಲಿದ್ದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಆ ಸಂದರ್ಭದಲ್ಲಿ ಪಿಎಸ್‌ಐ ಮಲ್ಲಿಕಾರ್ಜುನ ಹಾಗೂ ಕಾನ್ಸ್‌ಟೇಬಲ್ ಮಹ್ಮದ್ ಇಸಾಕ್‌ನಧಾಪ್ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಆರೋಪಿಗಳುಯತ್ನಿಸಿದ್ದಾರೆ. ತಕ್ಷಣ ಇನ್ಸ್‌ ಪೆಕ್ಟರ್ ಅವರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದ್ದಾರೆ.

ಇನ್ಸ್‌ಪೆಕ್ಟ‌ರ್ ಅವರ ಮಾತನ್ನು ಲೆಕ್ಕಿಸದೆ ಮತ್ತೆ ಹಲ್ಲೆಗೆ ಮುಂದಾದಾಗ ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ಹಾರಿಸಿದ ಗುಂಡುಗಳು ಆರೋಪಿಗಳ ಕಾಲಿಗೆ ತಗುಲಿದ್ದರಿಂದ ಕುಸಿದು ಬಿದ್ದಿದ್ದಾರೆ.
ತಕ್ಷಣ ಪೊಲೀಸರು ಆರೋಪಿಗಳನ್ನು ಸುತ್ತುವರೆದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಕಾರ್ಯಾಚರಣೆ ವೇಳೆ ಗಾಯಗೊಂಡಿರುವ ಸಿಬ್ಬಂದಿಯೂ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸುದ್ದಿ ತಿಳಿದು ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಭೇಟಿ ನೀಡಿ ಸಿಬ್ಬಂದಿಯವರ ಆರೋಗ್ಯ ವಿಚಾರಿಸಿದ್ದಾರೆ.

RELATED ARTICLES

Latest News