Friday, October 4, 2024
Homeಬೆಂಗಳೂರುಆ್ಯಸಿಡ್‌ ಎರಚಿ ಪರಾರಿಯಾದ ಆರೋಪಿಗಾಗಿ ಪೊಲೀಸರ ಹುಡುಕಾಟ

ಆ್ಯಸಿಡ್‌ ಎರಚಿ ಪರಾರಿಯಾದ ಆರೋಪಿಗಾಗಿ ಪೊಲೀಸರ ಹುಡುಕಾಟ

Police search for accused who threw acid and escaped

ಬೆಂಗಳೂರು, ಸೆ.24- ಖಾಸಗಿ ಕಂಪನಿಯ ನೌಕರನ ಮೇಲೆ ಆ್ಯಸಿಡ್‌ ಎರಚಿ ಪರಾರಿಯಾಗಿರುವ ಆರೋಪಿಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಆ್ಯಸಿಡ್ ದಾಳಿಯಿಂದ ಗಾಯಗೊಂಡಿ ರುವ ಮೂಲತ ಕಲ್ಬುರ್ಗಿಯ ನಾಗೇಶ್ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳು ತ್ತಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಿಂದ ಹುಡುಗಿ ವಿಚಾರದಲ್ಲಿ ಆತನ ಸ್ನೇಹಿತನೇ ನಾಗೇಶ್‌ ಮೇಲೆ ಆ್ಯಸಿಡ್‌ ಎರಚಿ ಪರಾರಿಯಾಗಿದ್ದಾನೆ. ಹಾಗಾಗಿ ಪೊಲೀಸರು ಆತನಿಗೆ ಹುಡುಕಾಟ ನಡೆಸುತ್ತಿದ್ದಾರೆ. ಕೃತ್ಯ ನಡೆದ ಸ್ಥಳದಲ್ಲಿ ದೊರೆತಿರುವಂತಹ ಆ್ಯಸಿಡ್‌ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆಗಾಗಿ ಅದನ್ನು ಎಫ್‌ಎಸ್‌‍ಎಲ್‌ಗೆ ಕಳುಹಿಸಲಾಗಿದೆ.

ಕಳೆದ ಭಾನುವಾರ ತಾನು ಕೆಲಸಮಾಡುವ ಫ್ಯಾಕ್ಟರಿಗೆ ರಜೆ ಇದ್ದ ಕಾರಣ ಸುಮನಹಳ್ಳಿಯ ಬಾರ್‌ವೊಂದರಲ್ಲಿ ಮದ್ಯ ಸೇವಿಸಿ ನಂತರ ಊಟ ಮಾಡಿಕೊಂಡು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಸ್ನೇಹಿತೆಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಾ ನಡೆದು ಹೋಗುತ್ತಿದ್ದಾಗ ಟಾಟಾಸುಮೋ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ನಾಗೇಶ್‌ ಮೇಲೆ ಆ್ಯಸಿಡ್‌ ಎರಚಿ ಪರಾರಿಯಾಗಿದ್ದಾನೆ.ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲಿಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

RELATED ARTICLES

Latest News