Saturday, January 25, 2025
Homeರಾಜ್ಯಗಣರಾಜ್ಯೋತ್ಸವಕ್ಕೆ ಪೊಲೀಸರ ಸರ್ಪಗಾವಲು, 1051 ಸಿಬ್ಬಂದಿಗಳ ನಿಯೋಜನೆ

ಗಣರಾಜ್ಯೋತ್ಸವಕ್ಕೆ ಪೊಲೀಸರ ಸರ್ಪಗಾವಲು, 1051 ಸಿಬ್ಬಂದಿಗಳ ನಿಯೋಜನೆ

Police security for Republic Day, 1051 personnel deployed

ಬೆಂಗಳೂರು,ಜ.24- ನಗರದ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಇಂದಿಲ್ಲಿ ತಿಳಿಸಿದರು.

ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಹಾಗೂ ಮೈದಾನದ ಭದ್ರತೆಯ ಸಲುವಾಗಿ ಮುಂಜಾಗರೂಕತಾ ಕ್ರಮಗಳಾಗಿ ಕಳೆದ 15 ದಿನಗಳಿಂದ ಮೈದಾನಕ್ಕೆ ಪೊಲೀಸರನ್ನು ಕಣ್ಣಾವಲು ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಹಾಗೂ ಬೆಂಗಳೂರು ನಗರದ ಎಲ್ಲಾ ಹೋಟೆಲ್, ಲಾಡ್ಜ್ ಗಳು, ತಂಗುದಾಣಗಳು, ಇನ್ನಿತರೆ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ವಾಸ್ತವ್ಯ ಹೂಡುವವರ

ಮೇಲೆ ಸೂಕ್ತ ನಿಗಾವಹಿಸಲಾಗಿರುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಧ್ವಜಾರೋಹಣ, ಕವಾಯತು ಹಾಗೂ ಸಾಂಸ್ಕೃತಿಕ ಸಮಾರಂಭದ ಉದ್ಘಾಟನೆಯನ್ನು ಗೌರವಾನ್ವಿತ ರಾಜ್ಯಪಾಲರು ನೆರವೇರಿಸಲಿದ್ದು, ಈ ಸಂಬಂಧ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಂಟು ಡಿಸಿಪಿಗಳು, 17 ಎಸಿಪಿಗಳು, 44 ಇನ್ಸ್ ಪೆಕ್ಟರ್ಗಳು, 114 ಎಸ್ಐಗಳು, 58 ಎಎಸ್ಐಗಳು, 551 ಪಿಸಿಗಳು, 80 ಮಹಿಳಾ ಸಿಬ್ಬಂದಿಗಳು ಸೇರಿದಂತೆ ಸಾದಾ ಉಡುಪಿನ-149 ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು 30 ಜನ ಕ್ಯಾಮೆರಾ ಸಿಬ್ಬಂದಿಗಳು ಸೇರಿ ಒಟ್ಟು 1051 ಜನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.

ಇದಲ್ಲದೇ ಮೈದಾನದ ಬಂದೋಬಸ್ತ್ ಕರ್ತವ್ಯಕ್ಕೆ 10 ಕೆಎಸ್ಆರ್ಪಿ ಮತ್ತು ಸಿಎಆರ್ ತುಕಡಿಗಳು, ಎರಡು ಅಗ್ನಿಶಾಮಕ ವಾಹನಗಳು, ಎರಡು ಆಂಬುಲೆನ್ಸ್ , 4 ಖಾಲಿ ವಾಹನಗಳು, ಒಂದು ಕ್ಷಿಪ್ರ ಕಾರ್ಯಾಚರಣೆ ಪಡೆ, ಒಂದು ಡಿ-ಸ್ವಾಟ್ ಹಾಗೂ ಒಂದು ಐಆರ್ವಿಗಳನ್ನು ನಿಯೋಜಿಸಲಾಗಿರುತ್ತದೆ ಗರುಡ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳಲಾಗಿದೆ.

ಮೈದಾನದ ಸುತ್ತ ಎಲ್ಲಾ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾವಹಿಸಲು 103 ಸಿ.ಸಿ.ಟಿ.ವಿ ಕ್ಯಾಮರಾಗಳನ್ನು ಮತ್ತು ಮೈದಾನದಲ್ಲಿ ಆಗಮಿಸುವವರ ತಪಾಸಣೆಗೆ 3 ಬ್ಯಾಗೇಜ್ ಸ್ಕ್ಯಾನರ್, 20 ಡಿಎಫ್ಎಂಡಿ ಮತ್ತು 40 ಹೆಚ್.ಹೆಚ್.ಎಂ.ಡಿ.ಗಳನ್ನು ಅಳವಡಿಸಲಾಗಿರುತ್ತದೆ.

ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಗೇಟ್ ನಂ.2ರಲ್ಲಿ ಪಿಂಕ್ ಬಣ್ಣದ ಪಟ್ಟಿಯ ವಿವಿಐಪಿ ಪಾಸ್ ಹೊಂದಿರುವವರು ಹಾಗೂ ಪಿಂಕ್ ಬಣ್ಣದ ಪಟ್ಟಿಯ ಪಾಸ್ ಹೊಂದಿರುವವರಿಗೆ ಪ್ರವೇಶವಿರುತ್ತದೆ. ಗೇಟ್ ನಂ.3ರಲ್ಲಿ ಮುಖ್ಯ ಅತಿಥಿ ಹಾಗೂ ಗಣ್ಯಾತಿಗಣ್ಯರು, ಹಳದಿ ಬಣ್ಣದ ಪಾಸ್ ಹೊಂದಿರುವವರಿಗೆ ಪ್ರವೇಶವಿರುತ್ತದೆ.

ಗೇಟ್ ನಂ.4ರಲ್ಲಿ ಬಿಳಿ ಬಣ್ಣದ ಪಾಸ್ ಹೊಂದಿರುವವರಿಗೆ ಹಾಗೂ ಮಾದ್ಯಮದವರಿಗೆ ಪ್ರವೇಶವಿದ್ದು, ಗೇಟ್ ನಂ.05ರಲ್ಲಿ ಹಸಿರು ಬಣ್ಣದ ಪಾಸ್ ಹೊಂದಿರುವ ಸಾರ್ವಜನಿಕರಿಗೆ ಪ್ರವೇಶವಿರುತ್ತದೆ. ಕಾರ್ಯಕ್ರಮದ ಭದ್ರತಾ ದಷ್ಟಿಯಿಂದ ಗೇಟ್ಗಳ ಪೊಲೀಸರೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ಕಟ್ಟುನಿಟ್ಟಿನ ನಿಯಮ;
ಸಮಾರಂಭಕ್ಕೆ ಆಗಮಿಸುವವರು ಬೆಳಿಗ್ಗೆ 8. 30 ರ ಒಳಗಾಗಿ ತಮ ಆಸನಗಳಲ್ಲಿ ಆಸೀನರಾಗತಕ್ಕದ್ದು, ಯಾವುದೇ ಕಾರಣಕ್ಕೂ ಮೈದಾನದದೊಳಗೆ ಪ್ರವೇಶಿಸತಕ್ಕದ್ದಲ್ಲ. ಸಾರ್ವಜನಿಕರು ಮಣಿಪಾಲ್ ಸೆಂಟರ್ ಕಡೆಯಿಂದ ಕಬ್ಬನ್ ರಸ್ತೆ ಮೂಲಕ ಗೇಟ್ ನಂ.5ರಿಂದ ಮೈದಾನ ಪ್ರವೇಶಿಸಲು ಸೂಚಿಸಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ತಮೊಂದಿಗೆ ಅನಗತ್ಯವಾದ ಬ್ಯಾಗೇಜ್ ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ. ಯಾವುದಾದರೂ ಅನುಮಾನಾಸ್ಪದ ವಸ್ತುಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ.

ಸಿಗರೇಟ್, ಬೆಂಕಿ ಪೆಟ್ಟಿಗೆ. ಹರಿತವಾದ ವಸ್ತು ಹಾಗೂ ಚಾಕು-ಚೂರಿಗಳು ನಿಷಿದ್ಧ, ಬಣ್ಣದ ದ್ರಾವಣಗಳು, ವಿಡಿಯೋ ಮತ್ತು ಸ್ಟಿಲ್ ಕ್ಯಾಮೆರಾಗಳು, ಮಾದಕ ವಸ್ತು, ಪಟಾಕಿ, ಸ್ಫೋಟಕ ವಸ್ತು, ಶಸಾ್ತ್ರಸ್ತ್ರಗಳು, ಮದ್ಯದ ಬಾಟಲ್ಗಳು, ನೀರಿನ ಬಾಟಲ್ಗಳು, ತಿಂಡಿ ತಿನಿಸುಗಳನ್ನು ಮೈದಾನಕ್ಕೆ ತರುವಂತಿಲ್ಲ.

RELATED ARTICLES

Latest News