Friday, September 20, 2024
Homeಬೆಂಗಳೂರುಯುವಕನನ್ನು ವಿವಸ್ತ್ರಗೊಳಿಸಿ ವಿಕೃತಿ ಮೆರೆದಿದ್ದ ರೌಡಿಗೆ ಪೊಲೀಸರ ಗುಂಡೇಟು

ಯುವಕನನ್ನು ವಿವಸ್ತ್ರಗೊಳಿಸಿ ವಿಕೃತಿ ಮೆರೆದಿದ್ದ ರೌಡಿಗೆ ಪೊಲೀಸರ ಗುಂಡೇಟು

police shot the rowdy who stripped and assaulted the young man

ಬೆಂಗಳೂರು, ಸೆ.17- ಯುವಕನನ್ನು ನಡು ರಸ್ತೆಯಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದ ರೌಡಿ ಪವನ್ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಿಕ್ಕಿಬಿದ್ದಿದ್ದಾನೆ.ರೌಡಿ ಪವನ್ ಅಲಿಯಾಸ್ ಕಡಬು ಗುಂಡೇಟಿನಿಂದ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಾಜಗೋಪಾಲನಗರ ಠಾಣೆಯ ರೌಡಿಶೀಟರ್ ಪವನ್, ಕೆಲವು ದಿನಗಳ ಹಿಂದೆ ಸುಂಕದಕಟ್ಟೆಯ ಬಳಿ ಯುವಕನೊಬ್ಬನನ್ನು ದ್ವೇಷದಿಂದ ಬೆದರಿಸಿ ಬಟ್ಟೆ ಬಿಚ್ಚಿಸಿ ಬೆತ್ತಲೆಗೊಳಿಸಿ ರಕ್ತ ಬರುವಂತೆ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದನು.

ಆ ಯುವಕ ಪ್ರಾಣ ಉಳಿಸಿಕೊಳ್ಳಲು ಸ್ಥಳದಿಂದ ಓಡಿದ್ದಾನೆ. ಈ ಬಗ್ಗೆ ವಿಡಿಯೋ ವೈರಲಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮೊನ್ನೆ ಈ ರೌಡಿ ಪವನ್ ಸುಂಕದಕಟ್ಟೆ ಬಳಿ ವಿಶ್ವಾಸ್ ಎಂಬ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರೌಡಿ ಪವನ್ ಮೇಲೆ ವಾರೆಂಟ್ ಇದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ನಡುವೆ ಯುವಕನನ್ನು ಬೆತ್ತಲೆ ಮಾಡಿ, ಹಲ್ಲೆ ನಡೆಸಿ ಬಳಿಕ ವೀಡಿಯೋ ಹರಿಬಿಟ್ಟು ತಲೆಮರೆಸಿಕೊಂಡಿದ್ದನು.

ಆ ವೀಡಿಯೋ ಆಧರಿಸಿ ರೌಡಿ ಪತ್ತೆಗೆ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಕಾಮಾಕ್ಷಿಪಾಳ್ಯ ಹಾಗೂ ಗೋವಿಂದರಾಜನಗರ ಠಾಣೆಯ ಇನ್‌್ಸಪೆಕ್ಟರ್ಗಳ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿದ್ದರು.ರೌಡಿ ಪವನ್ ಜ್ಞಾನಭಾರತಿ ಬಳಿಯ ಉಲ್ಲಾಳದ ಹಿಲ್ರಾಕ್ ಶಾಲೆ ಬಳಿ ಇರುವ ಬಗ್ಗೆ ಮಾಹಿತಿ ಕಲೆಹಾಕಿದ ಗೋವಿಂದರಾಜ ನಗರ ಠಾಣೆ ಇನ್ಸ್ ಪೆಕ್ಟರ್ ಸುಬ್ರಮಣಿ ಅವರ ನೇತೃತ್ವದ ತಂಡ ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಅಲ್ಲಿಗೆ ಹೋಗಿದೆ.

ಆ ಸಂದರ್ಭದಲ್ಲಿ ಪವನ್ ಸ್ಕೂಟರ್ನಲ್ಲಿ ಬರುತ್ತಿದ್ದುದ್ದನ್ನು ನೋಡಿ ಪೊಲೀಸ್ ವಾಹನದಲ್ಲಿ ಅಡ್ಡಗಟ್ಟಿದಾಗ ಈತ ಕೆಳಗೆ ಬಿದ್ದಿದ್ದಾನೆ. ಪೊಲೀಸರು ಹಿಡಿಯಲು ಮುಂದಾಗುತ್ತಿದ್ದಂತೆ ತಕ್ಷಣ ಮೇಲೆದ್ದು, ಡ್ರ್ಯಾಗರ್ನಿಂದ ಕಾಮಾಕ್ಷಿಪಾಳ್ಯ ಠಾಣೆಯ ಹೆಡ್ ಕಾನ್ಸಟೇಬಲ್ ವೆಂಕಟೇಶ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ, ಗೋವಿಂದರಾಜನಗರ ಠಾಣೆ ಇನ್ಸ್ ಪೆಕ್ಟರ್ ಸುಬ್ರಮಣಿ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದ್ದಾರೆ.

ಪೊಲೀಸರ ಮಾತಿಗೆ ಕಿವಿಗೊಡದೆ ಮತ್ತೆ ಹಲ್ಲೆಗೆ ಯತ್ನಿಸಿದಾಗ ಆತರಕ್ಷಣೆಗಾಗಿ ಇನ್ಸ್ ಪೆಕ್ಟರ್ ಹಾರಿಸಿದ ಗುಂಡು ರೌಡಿ ಪವನ್ ಕಾಲಿಗೆ ತಗುಲಿ ಕುಸಿದು ಬಿದ್ದಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸುತ್ತುವರೆದು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರ್ಯಾಚರಣೆ ವೇಳೆ ಹಲ್ಲೆಗೊಳಗಾದ ಹೆಡ್ ಕಾನ್ಸ್ ಟೇಬಲ್ ವೆಂಕಟೇಶ್ ಅವರು ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿ ಪವನ್ ಅಲಿಯಾಸ್ ಕಡಬು ಮೂಲತ ತುಮಕೂರಿನವನು. ಈತ ರಾಜಗೋಪಾಲನಗರ ಠಾಣೆಯ ರೌಡಿಶೀಟರ್. ಈತನ ವಿರುದ್ಧ ಒಟ್ಟು 12 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ರಾಜಗೋಪಾಲನಗರ ಠಾಣೆಯಲ್ಲಿ 7, ಕಾಮಾಕ್ಷಿಪಾಳ್ಯ 3, ಜ್ಞಾನಭಾರತಿ 1 ಹಾಗೂ ತುಮಕೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿವೆ.

RELATED ARTICLES

Latest News