Tuesday, April 14, 2026
Homeರಾಜಕೀಯಪಕ್ಷದಲ್ಲಿ ಜವಾಬ್ದಾರಿ ನಿಭಾಯಿಸದೇ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಅನಿವಾರ್ಯ : ಡಿಕೆಶಿ

ಪಕ್ಷದಲ್ಲಿ ಜವಾಬ್ದಾರಿ ನಿಭಾಯಿಸದೇ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಅನಿವಾರ್ಯ : ಡಿಕೆಶಿ

Action against those who are negligent in the party is inevitable: DKSH

ಬೆಂಗಳೂರು,ಏ.4- ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ಕೊಟ್ಟಿರುವ ಜವಾಬ್ದಾರಿ ನಿಭಾಯಿಸದೇ ಇದ್ದಾಗ ಕ್ರಮ ಅನಿವಾರ್ಯ ವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ತಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್‌ ಅಹಮದ್‌ ಅವರಿಗೆ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ತೊಡಗಿಸಿಕೊಳ್ಳುವಂತೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದರೂ, ಅವರು ಅದನ್ನು ಪಾಲನೆ ಮಾಡದೇ ಇದ್ದುದ್ದರಿಂದ ಕ್ರಮ ಕೈಗೊಂಡಿರಬಹುದು ಎಂದರು.

ತಾವು ಊರಿನಲ್ಲಿ ಇರಲಿಲ್ಲ. ಹಾಗಾಗಿ ಹೆಚ್ಚಿನ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದಾವಣಗೆರೆ ಕ್ಷೇತ್ರದ ಉಪಚುನಾವಣೆ ಬಗ್ಗೆ ಇನ್ನೂ ಒಂದು ವರದಿ ಬರಬೇಕು. ಅದರ ನಂತರ ಪ್ರಶ್ನೆಗಳಿಗೆ ಉತ್ತರ ನೀಡುವುದಾಗಿ ಅವರು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷನಾಗಿ ತಮಗೆ ಜವಾಬ್ದಾರಿ ಇದೆ. ಹೀಗಾಗಿ ಶಾಸಕರನ್ನು ಕರೆದು ಚರ್ಚೆ ಮಾಡುತ್ತೇನೆ. ಇದರಲ್ಲಿ ವಿಶೇಷತೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಶಾಸಕರುಗಳಿಗೆ ಅವರ ಭವಿಷ್ಯದ ಬಗ್ಗೆ ಮಾರ್ಗದರ್ಶನ ಮಾಡಬೇಕಾಗಿದೆ. ಹೀಗಾಗಿ ಒಬ್ಬೊಬ್ಬರನ್ನು ಕರೆದು ಚರ್ಚೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

RELATED ARTICLES

Latest News