Homeರಾಜಕೀಯಸರ್ಕಾರಕ್ಕೆ ರೈತರ ಹಿತಕ್ಕಿಂತ ತುಷ್ಟೀಕರಣದ ರಾಜಕಾರಣ ಮುಖ್ಯವಾಗಿದೆ : ಅಶೋಕ್‌ ವಾಗ್ದಾಳಿ

ಸರ್ಕಾರಕ್ಕೆ ರೈತರ ಹಿತಕ್ಕಿಂತ ತುಷ್ಟೀಕರಣದ ರಾಜಕಾರಣ ಮುಖ್ಯವಾಗಿದೆ : ಅಶೋಕ್‌ ವಾಗ್ದಾಳಿ

Appeasement politics is more important to the government than farmers' interests: Ashok attacks

ಬೆಂಗಳೂರು,ಜೂ.28- ಸರ್ಕಾರಕ್ಕೆ ರೈತನ ಹಿತ ಮುಖ್ಯವೇ, ಅಥವಾ ತುಷ್ಟೀಕರಣದ ರಾಜಕಾರಣ ಮುಖ್ಯವೇ? ರೈತನು ಭತ್ತ ಬೆಳೆದು ಇಡೀ ದೇಶದ ಹಸಿವನ್ನು ನೀಗಿಸುತ್ತಾನೆ. ಅಂತಹ ರೈತನನ್ನು ತನ್ನದೇ ಭೂಮಿಯ ಹಕ್ಕಿಗಾಗಿ ಸರ್ಕಾರಿ ಕಚೇರಿಗಳ ಮುಂದೆ ನಿಲ್ಲಿಸಿದರೆ ಅನ್ನದಾತನ ಶಾಪ ತಟ್ಟದೇ ಇರದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌‍ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರೈತರ ಭೂಮಿಯನ್ನು ವಕ್ಫ್ ವಿವಾದಕ್ಕೆ ಸಿಲುಕಿಸಿ, ಕಾಂಗ್ರೆಸ್‌‍ ಸರ್ಕಾರ ಯಾರ ಹಿತ ಕಾಯುತ್ತಿದೆ? ಕಾಂಗ್ರೆಸ್‌‍ ಸರ್ಕಾರದ ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣ ಈಗ ನಾಡಿನ ರೈತರ ಅಸ್ತಿತ್ವಕ್ಕೇ ಕುತ್ತು ತರುವ ಹಂತಕ್ಕೆ ತಲುಪಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಾದ್ಯಂತ ರೈತರ ಆರ್‌ಟಿಸಿ ಕಾಲಂ 11ರಲ್ಲಿ ವಕ್‌್ಫ ಉಲ್ಲೇಖಗಳನ್ನು ದಾಖಲಿಸಲಾಗುತ್ತಿದೆ ಎಂಬ ವರದಿಗಳು ಹೊರಬಿದ್ದಿದ್ದು, ಲಕ್ಷಾಂತರ ರೈತರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇದು ಕೇವಲ ದಾಖಲೆ ಬದಲಾವಣೆಯ ವಿಚಾರವಲ್ಲ. ಇದು ರೈತನ ಮಾಲೀಕತ್ವದ ಹಕ್ಕು, ಬದುಕು ಮತ್ತು ಭವಿಷ್ಯದ ಪ್ರಶ್ನೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, 1,80,000ಕ್ಕೂ ಹೆಚ್ಚು ರೈತರ ಖಖಿಅಗಳಲ್ಲಿ ಈಗಾಗಲೇ ವಕ್ಫ್ ಉಲ್ಲೇಖ ದಾಖಲಾಗಿದೆ. ಒಟ್ಟು 3,00,000 ಖಖಿಅಗಳನ್ನು ಈ ಪ್ರಕ್ರಿಯೆಯ ವ್ಯಾಪ್ತಿಗೆ ತರಲು ಕ್ರಮ ನಡೆಯುತ್ತಿದೆ ಎನ್ನಲಾಗಿದೆ. 31 ಜಿಲ್ಲೆಗಳ ರೈತರು ಇದರ ಪರಿಣಾಮಕ್ಕೆ ಒಳಗಾಗುವ ಆತಂಕದಲ್ಲಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾವಾರು ಅಂಕಿ-ಅಂಶಗಳೇ ಪರಿಸ್ಥಿತಿಯ ಗಂಭೀರತೆಯನ್ನು ಬಿಚ್ಚಿಡುತ್ತಿವೆ. ಉತ್ತರ ಕನ್ನಡ 7000 ಆರ್‌ಟಿಸಿಗಳು, ದಕ್ಷಿಣ ಕನ್ನಡ 48000, ಶಿವಮೊಗ್ಗ 38,000, ಬೆಂಗಳೂರು ದಕ್ಷಿಣ 18,000, ?? ಕಲಬುರಗಿ 17,000 ಹಾಗೂ ಬಾಗಲಕೋಟೆ ? 17,000 ಆರ್‌ಟಿಸಿಗಳು ಎಂದು ಉಲ್ಲೇಖಿಸಿದ್ದಾರೆ.

ಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ಈ ವರದಿಗಳು ತಪ್ಪಾಗಿದ್ದರೆ ಕೂಡಲೇ ರಾಜ್ಯದ ಜನರ ಮುಂದೆ ಸತ್ಯಾಂಶವನ್ನು ಇಡಿ. ಆದರೆ ವರದಿಗಳಲ್ಲಿ ಹೇಳಿರುವಂತೆ ರೈತರ ಆರ್‌ಟಿಸಿಗಳಲ್ಲಿ ಈ ರೀತಿಯ ಉಲ್ಲೇಖಗಳು ಸೇರಿದ್ದರೆ, ನಿಮ ಸರ್ಕಾರ ಉತ್ತರಿಸಲೇಬೇಕು ಎಂದು ಆಗ್ರಹಿಸಿದ್ದಾರೆ. ರೈತರು ತಮದೇ ಭೂಮಿಯನ್ನು ಮಾರಾಟ ಮಾಡಲು, ಬ್ಯಾಂಕ್‌ ಸಾಲ ಪಡೆಯಲು ಅಥವಾ ಮಾಲೀಕತ್ವದ ಹಕ್ಕು ಚಲಾಯಿಸಲು ಅನಿಶ್ಚಿತತೆ ಎದುರಿಸುವ ಪರಿಸ್ಥಿತಿ ಏಕೆ ನಿರ್ಮಾಣವಾಯಿತು? ರೈತರನ್ನು ತಮದೇ ಜಮೀನಿನಲ್ಲಿ ಭಿಕ್ಷುಕರನ್ನಾಗಿ ಮಾಡಲು ಹೊರಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಕೂಡಲೇ ಈ ಸಂಪೂರ್ಣ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ. ರೈತರ ಖಖಿಅಗಳಲ್ಲಿ ದಾಖಲಾಗಿರುವ ಎಲ್ಲ ವಿವಾದಾತಕ ಉಲ್ಲೇಖಗಳನ್ನು ಮರುಪರಿಶೀಲಿಸಿ. ರಾಜ್ಯದ ಜನರ ಮುಂದೆ ಶ್ವೇತಪತ್ರ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಅನ್ನದಾತನ ಭೂಮಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ರೈತನ ಭೂಮಿಯ ಮೇಲೆ ಕಣ್ಣು ಹಾಕಿದರೆ, ಕರ್ನಾಟಕದ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ರೈತನ ಭೂಮಿ ಉಳಿಯಬೇಕು… ರೈತನ ಹಕ್ಕು ಉಳಿಯಬೇಕು… ವಕ್‌್ಫ ಹೆಸರಿನಲ್ಲಿ ರೈತರ ಜಮೀನು ನುಂಗಲು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಅಶೋಕ್‌ ಎಚ್ಚರಿಸಿದ್ದಾರೆ.

RELATED ARTICLES

Latest News