ಬೆಂಗಳೂರು,ಮೇ 12- ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿರುವ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಸಹ ಇದೇ ರೀತಿಯ ನಿಲುವು ತಳೆದಿದ್ದವು ಎಂದು ಹೇಳಿ ಮೋದಿ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
X ಮಾಡಿರುವ ಅವರು, ಕಾಂಗ್ರೆಸ್ ನಾಯಕರು ದಿನನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕುವ ಮೊದಲು, ತಮದೇ ಪಕ್ಷದ ಹಳೆಯ ಹೇಳಿಕೆಗಳ ದಿನಚರಿಯನ್ನುಒಮೆ ತಿರುವಿ ಹಾಕಬೇಕು ಎಂದು ತಿರುಗೇಟು ನೀಡಿದ್ದಾರೆ.
1967 ರಲ್ಲಿ ಇಂದಿರಾ ಗಾಂಧಿಯವರು ಭಾರತೀಯರು ಚಿನ್ನ ಖರೀದಿಸುವುದನ್ನು ತಪ್ಪಿಸುವಂತೆ ಕೇಳಿದಾಗ ಅದನ್ನು ರಾಷ್ಟ್ರೀಯ ಶಿಸ್ತು ಎಂದು ಕರೆಯಲಾಯಿತು. 2013 ರಲ್ಲಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಚಿನ್ನ ಖರೀದಿಸಬೇಡಿ ಎಂದು ಜನರಲ್ಲಿ ಮನವಿ ಮಾಡಿದಾಗ ಆರ್ಥಿಕ ಜವಾಬ್ದಾರಿ ಎಂದು ಕರೆಯಲಾಯಿತು ಎಂದು ಹೇಳಿದ್ದಾರೆ.
ಈಗ ಇದೇ ರೀತಿಯ ಮನವಿ ಮಾಡಿದಾಗ ಕಾಂಗ್ರೆಸ್ ನಾಯಕರು ಏನೋ ಸಂಭವಿಸಿದೆ ಎಂಬಂತೆ ವರ್ತಿಸುತ್ತಾರೆ. ಬಹುಶಃ ಸಮಸ್ಯೆಯೆಂದರೆ ಪ್ರಧಾನಿ ಮೋದಿಜಿಯವರ ನೇತೃತ್ವದಲ್ಲಿ ಭಾರತದ ಆರ್ಥಿಕತೆಯನ್ನು ವಿಶ್ವಾಸ, ವಿಶ್ವಾಸಾರ್ಹತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯೊಂದಿಗೆ ನಿರ್ವಹಿಸ ಲಾಗುತ್ತಿದೆ ಎಂಬ ಅಂಶವನ್ನು ಅವರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿದೇಶಿ ವಿನಿಮಯವನ್ನು ಉಳಿಸಲು ಮತ್ತು ರೂಪಾಯಿ ಮೌಲ್ಯವನ್ನು ಹೆಚ್ಚಿಸಲು ಇದೇ ರೀತಿಯ ಆರ್ಥಿಕ ಶಿಸ್ತಿಗೆ ಕರೆ ನೀಡಿದಾಗ, ಕಾಂಗ್ರೆಸ್ ನಾಯಕರು ಇದುವರೆಗೂ ಸಂಭವಿಸದ ಏನೋ ಒಂದು ವಿಚಿತ್ರ ನಡೆಯೆಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮತ್ತೊಂದು ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರು ಎಲ್ಲರಿಗೂ ಗೊತ್ತಿರುವ ನಗ್ನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಏಳೂವರೆ ಕೋಟಿ ಕನ್ನಡಿಗರ ಆಕ್ರೋಶಕ್ಕೆ ದನಿಗೂಡಿಸಿದ್ದಾರೆ. ಆ ಸತ್ಯದ ಬಿಸಿ ನಿಮಗಿಂದು ತಟ್ಟುತ್ತಿದೆ. ಸತ್ಯ ಎಂದಿನಂತೆ ನಿಮನ್ನು ಸಹಜವಾಗಿ ವಿಚಲಿತಗೊಳಿಸಿದೆ ಎಂದು ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯನವರೇ, ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ ಭಾಷಣ ನಿಮನ್ನು ಏಕೆ ಇಷ್ಟು ವಿಚಲಿತಗೊಳಿಸಿದೆ ಎಂಬುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಇಷ್ಟಕ್ಕೂ ಪ್ರಧಾನಿ ಮೋದಿ ಅವರು ಹೇಳಿದ್ದರಲ್ಲಿ ಹೊಸತೇನೂ ಇಲ್ಲ. ಅಧಿಕಾರ ಹಂಚಿಕೆಯ ನಿರಂತರ ಸರ್ಕಸ್ ಮತ್ತು ನಿಮ ಸರ್ಕಾರದ ಒಳಜಗಳದಿಂದ ಕಂಗೆಟ್ಟಿರುವ 7 ಕೋಟಿ ಕನ್ನಡಿಗರ ಅಂತರಾಳದ ಧ್ವನಿಯನ್ನೇ ಪ್ರಧಾನಿಗಳು ಪ್ರತಿಧ್ವನಿಸಿದ್ದಾರೆ. ಆ ಸತ್ಯವೇ ಇಂದು ನಿಮಗೆ ನುಂಗಲಾರದ ತುತ್ತಾಗಿದೆ ಎಂದು ಟೀಕಿಸಿದ್ದಾರೆ.
