ಬೆಂಗಳೂರು,ಜ.13- ಕಾಂಗ್ರೆಸ್ ಶಾಸಕರ ದಬ್ಬಾಳಿಕೆ ಮತ್ತು ಗೂಂಡಾ ವರ್ತನೆಯನ್ನು ವಿರೋಧಿಸಿ ಇದೇ ತಿಂಗಳ 17 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸರ್ಕಾರ ಎಲ್ಲಾ ರಂಗಗಳಲ್ಲೂ ಸಂಪೂರ್ಣವಾಗಿ ವಿಫಲವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಸರ್ಕಾರದ ನೀತಿಯನ್ನು ವಿರೋಧಿಸಿ ಜ.17 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಪಕ್ಷದ ಕಚೇರಿಯಲ್ಲಿ ಸಂಸದರಾದ ಜಗದೀಶ್ ಶೆಟ್ಟರ್ ಹಾಗೂ ಗೋವಿಂದ ಕಾರಜೋಳ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಸರ್ಕಾರದ ಎಲ್ಲಾ ವೈಫಲ್ಯ, ಕಾನೂನು ಸುವ್ಯವಸ್ಥೆ ಹದಗೆಟ್ಟ ವಿಚಾರ ಗಮನದಲ್ಲಿಟ್ಟುಕೊಂಡು ಬೃಹತ್ ಹೋರಾಟ ಮಾಡಲಾಗುವುದು. ನಂತರ ಬಾಗಲಕೋಟೆಯಲ್ಲೂ ರೈತರನ್ನು ಕಡೆಗಣಿಸಿರುವುದರ ಬಗ್ಗೆಯೂ ಹೋರಾಟ ಮಾಡಲಾಗುವುದು ಎಂದರು.
ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕರು ಗೂಂಡಾವರ್ತಿ ತೋರಿದ್ದಾರೆ. ಭೀತಿಯ ವಾತಾವರಣವನ್ನು ಸೃಷ್ಟಿಸಲಾಗಿದೆ. ಅವರ ಅಂಗರಕ್ಷಕರೇ ಅವರ ಕಾರ್ಯಕರ್ತನನ್ನು ಕೊಂದಿದ್ದಾರೆ. ಸುಳಿವು ಬಿಟ್ಟು ಕೊಡದಿರಲು ರಾಜಶೇಖರ್ ಶವ ಸುಡಲಾಗಿದೆ. ಸರ್ಕಾರ ಈವರೆಗೂ ಅವರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನೆ ಮಾಡಿದರು.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ದಲಿತ ಹೆಣ್ಣು ಬರ್ಬರವಾಗಿ ಹತ್ಯೆಗೊಳಗಾಗಿದ್ದಾಳೆ. ಸರ್ಕಾರದ ಯಾವ ಸಚಿವರೂ ಅಲ್ಲಿಗೆ ಹೋಗಲಿಲ್ಲ ನಾವು ಅಲ್ಲಿಗೆ ಭೇಟಿ ಕೊಟ್ಟಿದ್ದೆವು. ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ಕೊಟ್ಟರು. ಆದರೆ ಯಲ್ಲಾಪುರದಲ್ಲಿ ಹತ್ಯೆಗೀಡಾದ ದಲಿತ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಕೊಡಬೇಕು. 50 ಲಕ್ಷ ಪರಿಹಾರ ಕೊಡದಷ್ಟು ದಾರಿದ್ರ್ಯ ಸರ್ಕಾರಕ್ಕೆ ಬಂದಿದೆಯೇ ಎಂದು ತರಾಟೆಗೆ ತೆಗೆದುಕೊಂಡರು.
ಸುಳ್ಯದ ನಮ ದಲಿತ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಶ್ರದ್ಧಾಂಜಲಿ ಟ್ವೀಟ್ ಮಾಡಿದ್ದಾರೆ. ಇದರ ವಿರುದ್ಧ ಈಗಾಗಲೇ ದೂರು ಕೊಡಲಾಗಿದೆ. ಪೊಲೀಸರು ಇದುವರೆಗೂ ಕಾನೂನು ಕ್ರಮ ಕೈಗೊಂಡಿಲ್ಲ. ಆ ಕಾರ್ಯಕರ್ತನ ಬಂಧನ ಆಗಿಲ್ಲ. ರಾಜ್ಯದಲ್ಲಿ ದಲಿತರಿಗೆ ಅಪಮಾನ ಆಗುತ್ತ್ತಿದೆ. ಸಿದ್ದರಾಮಯ್ಯ ಸುಮನೆ ಇದ್ದಾರೆ. ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳೂತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸಿದರು.
ಇಷ್ಟೆಲ್ಲಾ ಘಟನೆಗಳು ನಡೆಯುತ್ತಿದ್ದರೂ ಗೃಹ ಸಚಿವರು ಯಾವುದಕ್ಕೂ ಚಕಾರ ಎತ್ತುತ್ತಿಲ್ಲ. ಅವರಿಗೆ ಏನೂ ಗೊತ್ತೇ ಇಲ್ಲ. ಸರ್ಕಾರ ರಾಜ್ಯವನ್ನು ಕುಡುಕರ ರಾಜ್ಯ ಮಾಡಿದೆ. ಬಡವರ ಮನೆಗಳನ್ನು ಸರ್ಕಾರ ಹಾಳು ಮಾಡುತ್ತ್ತಿದೆ. ಡ್ರಗ್‌್ಸ ಹಾವಳಿ ರಾಜ್ಯದಲ್ಲಿ ಹೆಚ್ಚಾಗಿದೆ. ಇದು ನಾಲಾಯಕ್ ಸರ್ಕಾರ. ಬೊಕ್ಕಸಕ್ಕೆ ಹಣ ಸಂಗ್ರಹ ಮಾಡಲಾಗದೇ ಜನರಿಗೆ ಹೆಂಡ ಕುಡಿಸಿ ಅಬಕಾರಿ ಆದಾಯ ಹೆಚ್ಚಳ ಮಾಡಿಕೊಳ್ಳಲು ಮುಂದಾಗಿದೆ. ಸರ್ಕಾರ ರಾಜ್ಯವನ್ನು ಕುಡುಕರ ರಾಜ್ಯ ಮಾಡಿದೆ ಎಂದು ಟೀಕಾ ಪ್ರಹಾರ ನಡೆಸಿದರು.
