Thursday, April 16, 2026
Homeರಾಜಕೀಯಸಿಎಂ, ಡಿಸಿಎಂ ನಾಳೆ ದೆಹಲಿಗೆ : ಬಿರುಸುಗೊಂಡ ರಾಜಕೀಯ ಚಟುವಟಿಕೆಗಳು

ಸಿಎಂ, ಡಿಸಿಎಂ ನಾಳೆ ದೆಹಲಿಗೆ : ಬಿರುಸುಗೊಂಡ ರಾಜಕೀಯ ಚಟುವಟಿಕೆಗಳು

CM, DCM to visit Delhi tomorrow: Political activities intensify

ಬೆಂಗಳೂರು,ಏ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದು ಕಾಂಗ್ರೆಸ್‌‍ನಲ್ಲಿ ಚಟುವಟಿಕೆಗಳು ಮತ್ತಷ್ಟು ಗದರಿಗೆದರಿವೆ.

ಸಚಿವ ಸಂಪುಟ ಪುನರ್‌ ರಚನೆ, ರಾಜ್ಯಸಭೆ, ವಿಧಾನಪರಿಷತ್‌ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ, ನಿಗಮ ಮಂಡಳಿಗಳ ನೇಮಕಾತಿ ಕುರಿತಂತೆ ಹೈಕಮಾಂಡ್‌ ನಾಯಕರ ಜೊತೆ ನಾಳೆಯ ಭೇಟಿಯ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚರ್ಚೆ ನಡೆಸುವ ಸಾಧ್ಯತೆ ಇದೆ.

ಪೂರ್ವ ನಿಗದಿತ ಕಾರ್ಯಕ್ರಮಗಳ ಪ್ರಕಾರ ಸಿದ್ದರಾಮಯ್ಯ ಅವರು, ದೆಹಲಿಗೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಆದರೆ ಡಿ.ಕೆ.ಶಿವಕುಮಾರ್‌ ಅವರ ಭೇಟಿ ಇನ್ನೂ ಖಚಿತವಾಗಿಲ್ಲ. ಈಗಾಗಲೇ 20ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಅವರಲ್ಲಿ ಕೆಲವರು ಇಂದು ಸಂಜೆಯೇ ಬೆಂಗಳೂರಿಗೆ ವಾಪಸ್‌‍ ಬರುತ್ತಿದ್ದು, ನಾಳೆ ಟಿ.ಬಿ.ಜಯಚಂದ್ರ ಸೇರಿದಂತೆ ಪ್ರಮುಖ ನಾಯಕರು ದೆಹಲಿಯಲ್ಲೇ ಉಳಿದುಕೊಳ್ಳಲಿದ್ದಾರೆ.

ಟಿ.ಬಿ.ಜಯಚಂದ್ರ ಅವರು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅನಂತರ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ ರಾಜ್ಯದ ನಾಯಕರುಗಳ ಜೊತೆ ಯಾವ ರೀತಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

RELATED ARTICLES

Latest News