Homeರಾಜಕೀಯದಿನೇಶ್‌ ಗುಂಡೂರಾವ್‌ ಜತೆ ಸಿಎಂ ಡಿಕೆಶಿ ಮಾತುಕತೆ

ದಿನೇಶ್‌ ಗುಂಡೂರಾವ್‌ ಜತೆ ಸಿಎಂ ಡಿಕೆಶಿ ಮಾತುಕತೆ

CM DK talks with Dinesh Gundu Rao

ಬೆಂಗಳೂರು, ಆ.5- ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತರಾಗಿರುವ ಕಾಂಗ್ರೆಸ್‌‍ನ ಹಿರಿಯ ನಾಯಕ ಹಾಗೂ ಶಾಸಕ ದಿನೇಶ್‌ ಗುಂಡೂರಾವ್‌ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿ ಸಮಾಧಾನಪಡಿಸುವ ಪ್ರಯತ್ನ ಮಾಡಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮಸೀದಿಯೊಂದರಲ್ಲಿ ನಡೆದ ಉರುಸ್‌‍ ಕಾರ್ಯಕ್ರಮದ ಸಂದರ್ಭದಲ್ಲಿ ಇಬ್ಬರು ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟ ವಿಸ್ತರಣೆಯ ಬಳಿಕ ಉಂಟಾಗಿರುವ ಅಸಮಾಧಾನ ಶಮನಗೊಳಿಸುವ ಉದ್ದೇಶದಿಂದ ಈ ಚರ್ಚೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಾತುಕತೆ ವೇಳೆ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌‍ ಹೈಕಮಾಂಡ್‌ ತೆಗೆದುಕೊಂಡಿರುವ ನಿರ್ಧಾರವೇ ಅಂತಿಮವಾಗಿದ್ದು, ವರಿಷ್ಠರ ತೀರ್ಮಾನವನ್ನು ಪ್ರಶ್ನಿಸುವುದು ಸೂಕ್ತವಲ್ಲ ಎಂದು ಡಿ.ಕೆ. ಶಿವಕುಮಾರ್‌ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಅವಕಾಶಗಳು ದೊರೆಯಲಿದ್ದು, ಅನಗತ್ಯ ಗೊಂದಲಗಳಿಗೆ ಅವಕಾಶ ನೀಡದೆ ತಾಳೆಯಿಂದ ಇರಬೇಕು ಎಂದು ಅವರು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ದಿನೇಶ್‌ ಗುಂಡೂರಾವ್‌ ಅವರಿಗೆ ಹಲವು ಬಾರಿ ಸಚಿವರಾಗುವ ಅವಕಾಶ ದೊರೆತಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದಾರೆ. ಪಕ್ಷದ ಬಗ್ಗೆ ಅವರ ಬದ್ಧತೆಯನ್ನು ಹೈಕಮಾಂಡ್‌ ಗಮನದಲ್ಲಿಟ್ಟುಕೊಂಡಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆಯ ನಂತರ ದಿನೇಶ್‌ ಗುಂಡೂರಾವ್‌ ಸಾಮಾಜಿಕ ಜಾಲತಾಣದಲ್ಲಿ ತಮ ಅಸಮಾಧಾನವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದರು. ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಕಾರಣವೇನು ಎಂಬುದನ್ನು ಪಕ್ಷದ ನಾಯಕತ್ವ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ದಿನೇಶ್‌ ಗುಂಡೂರಾವ್‌ ನಡುವಿನ ಮಾತುಕತೆ ಕಾಂಗ್ರೆಸ್‌‍ನ ಅಸಮಾಧಾನಿತ ಶಾಸಕರ ರಾಜಕೀಯ ಬೆಳವಣಿಗೆಗಳ ನಡುವೆ ಮಹತ್ವ ಪಡೆದುಕೊಂಡಿದ್ದು, ಇದರ ಪರಿಣಾಮ ಮುಂದಿನ ದಿನಗಳಲ್ಲಿ ಗೋಚರಿಸುವ ಸಾಧ್ಯತೆ ಇದೆ.

RELATED ARTICLES
spot_img

Latest News