ಬೆಂಗಳೂರು,ಜು.4- ಅತ್ತು-ಸುರಿದು, ಕಾಡಿ-ಬೇಡಿ, ದೆಹಲಿಯ ಹೈಕಮಾಂಡ್ ಬಾಗಿಲು ಕಾದು ಕೊನೆಗೂ ಮುಖ್ಯಮಂತ್ರಿ ಕುರ್ಚಿಯ ಕನಸನ್ನು ನನಸಾಗಿಸಿಕೊಂಡ ಡಿ.ಕೆ. ಶಿವಕುಮಾರ್ ಅವರ ಸರ್ಕಾರಕ್ಕೆ ಒಂದು ತಿಂಗಳು ಕಳೆದರೂ ಕೋಟ್ಯಂತರ ಕನ್ನಡಿಗರ ಕನಸುಗಳು ಭ್ರಮನಿರಸನವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಡಿಕೆಶಿ ಸರ್ಕಾರಕ್ಕೆ ಒಂದು ತಿಂಗಳು… ಆದರೆ ಕನ್ನಡಿಗರಿಗೆ ಮಾತ್ರ ತಪ್ಪಲಿಲ್ಲ ನಿತ್ಯ ಗೋಳು! ಸಿಎಂ ಶಿವಕುಮಾರ್ ಅವರೇ, ನಿಮ ರಾಜಕೀಯ ಕನಸೇನೋ ನನಸಾಗಿದೆ. ಆದರೆ ಕೇವಲ ಒಂದು ತಿಂಗಳಲ್ಲೇ ಕೋಟ್ಯಂತರ ಕನ್ನಡಿಗರ ಕನಸುಗಳು ಸಂಪೂರ್ಣ ಭ್ರಮನಿರಸನವಾಗಿವೆ ಎಂದು ಕಿಡಿಕಾರಿದ್ದಾರೆ.
ಪಗತಿಶೀಲ ರಾಜ್ಯವಾಗಿದ್ದ ನಮ ಹೆಮೆಯ ಕರ್ನಾಟಕದ ಯಶಸ್ಸಿಗೆ ವಕ್ಕರಿಸಿದ ಅತಿ ದೊಡ್ಡ ಡಿಸಾಸ್ಟರ್ಅಂದರೆ ಅದು ನಿಮ ಕಾಂಗ್ರೆಸ್ ಸರ್ಕಾರ. ರಸಗೊಬ್ಬರಕ್ಕಾಗಿ ಸಾಲಿನಲ್ಲಿ ಚಪ್ಪಲಿ ಇಟ್ಟು ದಿನಗಟ್ಟಲೆ ಕಾಯಬೇಕಾದ ದುಸ್ಥಿತಿ, ನೀರಿಗಾಗಿ ಹೋರಾಟ, ಬರದ ಭೀತಿ, ಭೂಸ್ವಾಧೀನದ ಆತಂಕ, ಅನ್ನದಾತ ನಿಮ ಆಡಳಿತದಲ್ಲಿ ತನ್ನದೇ ಜಮೀನಿನಲ್ಲಿ ಭಿಕ್ಷುಕನಂತಾಗಿದ್ದಾನೆ ಎಂದು ಆರೋಪಿಸಿದ್ದಾರೆ.
ಭರವಸೆಯಾಗಿಯೇ ಉಳಿದ ನೇಮಕಾತಿಯ ಆಶ್ವಾಸನೆ, ಹೊಸ ಉದ್ಯೋಗದಲ್ಲಿ ಶೂನ್ಯ ಸಾಧನೆ. ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪರಿಷ್ಕರಣೆಯ ಹೆಸರಿನಲ್ಲಿ ಸ್ವಾಭಿಮಾನಿ ಗೃಹಲಕ್ಷಿಯರ ಮೇಲೆ ಅನುಮಾನ. ಬಡವರು ಮತ್ತು ಮಧ್ಯಮ ವರ್ಗಕ್ಕೆ ನೆಮದಿ ಇಲ್ಲ, ಬೆಲೆ ಏರಿಕೆ, ತೆರಿಗೆಗಳ ಹೊರೆ, ದೈನಂದಿನ ವೆಚ್ಚ ದಿನದಿಂದ ದಿನಕ್ಕೆ ಏರುತ್ತಿದೆ. ಇದು ಗ್ಯಾರಂಟಿ ಸರ್ಕಾರವಲ್ಲ, ಲೂಟಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.
ಅನಿಶ್ಚಿತ ಆಡಳಿತ ಮತ್ತು ಕಮಿಷನ್ ದಂಧೆಗೆ ಹೆದರಿ ಹೂಡಿಕೆದಾರರು ನೆರೆರಾಜ್ಯಗಳಿಗೆ ಪಲಾಯನ ಮಾಡುತ್ತಿದ್ದಾರೆ. ಟ್ರಾಫಿಕ್ ನರಕ, ಗುಂಡಿ ಬಿದ್ದ ರಸ್ತೆಗಳು, ಯೋಜನಾ ರಹಿತ ಅವ್ಯವಸ್ಥೆ, ಪರಿಹಾರದ ಸುಳಿವೇ ಕಾಣುತ್ತಿಲ್ಲ. ಜನರಿಗೆ ಎಲ್ಲೂ ಆಡಳಿತ ಕಾಣುತ್ತಿಲ್ಲ. ಕಾಣುತ್ತಿರುವುದು ಒಂದೇ – ಸುಳ್ಳು ಪ್ರಚಾರ ಮತ್ತು ಭ್ರಷ್ಟಾಚಾರ ಎಂದು ಟೀಕಿಸಿದ್ದಾರೆ.
ಕೇವಲ 30 ದಿನಗಳ ಟ್ರೈಲರ್ನಲ್ಲೇ ಇಡೀ ರಾಜ್ಯದ ಕನಸನ್ನು ನುಚ್ಚು ನೂರು ಮಾಡಿರುವ ನಿಮ ಸರ್ಕಾರ, ಇನ್ನು ಎರಡು ವರ್ಷ ಮುಂದುವರಿದರೆ ಕರ್ನಾಟಕದ ಸ್ಥಿತಿ ಏನಾಗಬಹುದು ಎಂಬ ಆತಂಕ ಪ್ರತಿಯೊಬ್ಬ ಕನ್ನಡಿಗನಲ್ಲಿದೆ ಎಂದು ಗುಡುಗಿದ್ದಾರೆ. ಮುಖ್ಯಮಂತ್ರಿಗಳೇ, ನಿಮ ಕುರ್ಚಿಯ ಕನಸು ನನಸುಗೊಂಡಿದೆ, ಆದರೆ ಕರ್ನಾಟಕದ ಜನತೆಯ ಕನಸುಗಳು, ಆಶೋತ್ತರಗಳು, ನಿರೀಕ್ಷೆಗಳು ಮಾತ್ರ ಸಂಪೂರ್ಣವಾಗಿ ಭ್ರಮನಿರಸನಗೊಂಡಿವೆ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.
