Homeರಾಜಕೀಯಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಮೌನ ಮುರಿದ ಡಿಕೆಶಿ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಮೌನ ಮುರಿದ ಡಿಕೆಶಿ

DK breaks silence after Siddaramaiah's resignation accepted

ಬೆಂಗಳೂರು, ಮೇ 29- ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ಮೌನಕ್ಕೆ ಶರಣಾಗಿದ್ದ ಅವರ ಸಂಪುಟದ ಸಚಿವರು ಹಾಗೂ ಪ್ರಮುಖ ನಾಯಕರು ಇಂದು ಬೆಳಗ್ಗೆ ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ ಬಳಿಕ, ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾರಂಭಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಸಂಭವನೀಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ ಸಿದ್ದರಾಮಯ್ಯನವರು ಎಂದಿದ್ದಾರೆ.

ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತೀಯರಾದ ಸಿದ್ದರಾಮಯ್ಯ ಅವರು, ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿದ್ದಾರೆ. ಭಾರತೀಯ ರಾಜಕಾರಣದ ಧೀಮಂತ ನಾಯಕರಾಗಿದ್ದಾರೆ ಎಂದು ಕೊಂಡಾಡಿದ್ದಾರೆ.

ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸರಣೀಯ ಎಂದು ಹೇಳಿದ್ದಾರೆ.
2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.

ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ. ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ ಎಂದು ಕರೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರಂತೆಯೇ ದಿನೇಶ್‌ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಕೃಷ್ಣಭೈರೇಗೌಡ ಸೇರಿದಂತೆ ಹಲವರು ಸಿದ್ದರಾಮಯ್ಯ ಅವರ ನಿರ್ಗಮನಕ್ಕೆ ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News