ಚಿಕ್ಕಮಗಳೂರು, ಸೆ.13- ಬಿಜೆಪಿಯಲ್ಲೇ ಹುಟ್ಟಿದ್ದೇನೆ, ಬಿಜೆಪಿಯಲ್ಲೇ ಸಾಯುತ್ತೇನೆ. ಅಧಿಕಾರಕ್ಕಾಗಿ ಅಲ್ಲ, ಸಿದ್ಧಾಂತಕ್ಕಾಗಿ ರಾಜಕಾರಣಕ್ಕೆ ಬಂದಿದ್ದೇನೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದರು.
ಬೆಳವಾಡಿಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, 20 ವರ್ಷಗಳ ಶಾಸಕತ್ವದ ಅವಧಿಯಲ್ಲಿ ರಸ್ತೆ, ನೀರಾವರಿ, ಅಂಬೇಡ್ಕರ್ ಭವನ, ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಹಲವು ಜನಪರ ಕಾರ್ಯಗಳಿಗೆ ಆದ್ಯತೆ ನೀಡಿರುವುದಾಗಿ ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಪಿಂಚಣಿ, ತ್ರಿಫೇಸ್ ವಿದ್ಯುತ್, ಬಿಪಿಎಲ್ ಕಾರ್ಡ್ ಹಾಗೂ ಅಕ್ಕಿ ವಿತರಣೆಯ ಸಮಸ್ಯೆಗಳಿಂದ ಜನರು ಸಂಕಷ್ಟದಲ್ಲಿದ್ದಾರೆ. ಹಬ್ಬದ ಮುನ್ನವೇ ಬಾಕಿ ಪಿಂಚಣಿ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಜನರು ಸಂಕಷ್ಟದಲ್ಲಿರುವಾಗ ಸರ್ಕಾರ ಸಂಭ್ರಮಾಚರಣೆ ಹಾಗೂ ಜಾಹೀರಾತುಗಳಿಗೆ ಒತ್ತು ನೀಡಬಾರದು. ಮೊದಲು ಜನರು ಸಂಭ್ರಮಿಸುವಂತಹ ವಾತಾವರಣ ನಿರ್ಮಿಸಬೇಕು ಎಂದು ಸಿ.ಟಿ. ರವಿ ಆಗ್ರಹಿಸಿದರು.
