Saturday, December 6, 2025
Homeರಾಜಕೀಯಈಗ ಚುನಾವಣೆ ನಡೆದರೆ ಕಾಂಗ್ರೆಸ್‌‍ಗೆ 30 ಸೀಟೂ ಬರಲ್ಲ : ಆರ್‌.ಅಶೋಕ್‌

ಈಗ ಚುನಾವಣೆ ನಡೆದರೆ ಕಾಂಗ್ರೆಸ್‌‍ಗೆ 30 ಸೀಟೂ ಬರಲ್ಲ : ಆರ್‌.ಅಶೋಕ್‌

If elections are held now, Congress will not get even 30 seats: R. Ashok

ಬೆಂಗಳೂರು,ಡಿ.4- ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್‌‍ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರಂಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಭವಿಷ್ಯ ನುಡಿದಿದ್ದಾರೆ.

ತಮ ಸಾಮಾಜಿಕ ಜಾಲ ತಾಣ ಎ್ಸ್‌‍ ನಲ್ಲಿ ಪ್ಟೋ್‌ ಮಾಡಿರುವ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರೇ, 40% ಕಮಿಷನ್‌ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್‌ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರ ಇದೆ. ಸ್ವತಃ ಮಾನ್ಯ ಉಪಲೋಕಾಯುಕ್ತರೇ ತಮ ಘನ ಸರಕಾರಕ್ಕೆ ಸರ್ಟಿಫಿಕೇಟ್‌ ಕೊಟ್ಟಿದ್ದಾರೆ. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

RELATED ARTICLES

Latest News