Homeರಾಜಕೀಯಡಿಕೆಶಿ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ತಿರುಗೇಟು

ಡಿಕೆಶಿ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ತಿರುಗೇಟು

Nikhil Kumaraswamy hits back at DK Shivakumar

ಬೆಂಗಳೂರು, ಮೇ 20- ಕೊಟ್ಟ ಕುದುರೆಯನ್ನು ನೀವೇ ಏರಿದ್ದೀರೋ ಅಥವಾ ಬೇರೆಯವರು ನಿಮನ್ನು ಕೆಳಗೆ ಇಳಿಸಿದ್ದಾರೋ ಎಂಬುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಟೀಕಿಸಿದ್ದಾರೆ.

ಈ ಸಂಬಂಧ ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಡಿ.ಕೆ ಅಣ್ಣ, 136 ಜನ ಶಾಸಕರ ಭಾರಿ ಬಹುಮತ ಬೆನ್ನಿಗಿಟ್ಟುಕೊಂಡು ಮೂರು ವರ್ಷದಿಂದ ಮಾಡಿದ್ದೇನು? ಎಂದು ಶಿವಕುಮಾರ್‌ ಅವರನ್ನು ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಉಪ ಮುಖ್ಯಮಂತ್ರಿ ಟೀಕಿಸಿರುವುದಕ್ಕೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿಯಾಗುವ ಹಗಲುಗನಸಿನ ಬೋರ್ಡ್‌ ಹಾಕಿಕೊಂಡು ಕಾಯುತ್ತಾ ಕುಳಿತಿರುವುದು ನೀವು. ಮೊದಲು ಆ ಬೋರ್ಡ್‌ ನಿಜ ಮಾಡಿಕೊಳ್ಳಿ, ಆಮೇಲೆ ಬೇರೆಯವರ ಸಂಖ್ಯಾಬಲದ ಬಗ್ಗೆ ಮಾತನಾಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News