Homeರಾಜಕೀಯಸಿದ್ದರಾಮಯ್ಯನವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ : ಪರಮೇಶ್ವರ್

ಸಿದ್ದರಾಮಯ್ಯನವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ : ಪರಮೇಶ್ವರ್

ಬೆಂಗಳೂರು, ಸೆ.11- ಸಿದ್ದರಾಮಯ್ಯನವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ. ಹಾಗೊಂದು ವೇಳೆ ಅಸಮಾಧಾನ ಇದ್ದಿದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನೇ ಕೊಡುತ್ತಿರಲಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದರು.

ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುವುದಾಗಿ ಸಿದ್ದರಾಮಯ್ಯನವರು ಮೊದಲಿನಿಂದಲೂ ಹೇಳುತ್ತ ಬಂದಿದ್ದರು. ಅದರಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇದು ಮುಗಿದು ಹೋದ ಅಧ್ಯಾಯ. ಈ ವಿಚಾರವಾಗಿ ಪುನಃ ಪುನಃ ಚರ್ಚೆ ಮಾಡುವುದರಲ್ಲಿ ಅರ್ಥವಿಲ್ಲ. ಸಿದ್ದರಾಮಯ್ಯ ಅವರು ಪ್ರಸ್ತುತ ಕಾಂಗ್ರೆಸ್‌‍ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿರುವುದರಿಂದ ದೆಹಲಿ ಭೇಟಿ ಸಹಜ ಪ್ರಕ್ರಿಯೆಯಾಗಿದೆ. ಅದಕ್ಕೆ ಬೇರೆ ಅರ್ಥಗಳನ್ನು ಕಲ್ಪಿಸಬಾರದು ಎಂದರು.
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ನೇತೃತ್ವದ ನಮ ಸರ್ಕಾರಕ್ಕೆ 100 ದಿನಗಳು ಪೂರೈಸಿವೆ. ಸಾಕಷ್ಟು ಸವಾಲುಗಳು ನಮ ಮುಂದಿವೆ. ದೃತಿಗೆಡದೆ ಎಲ್ಲವನ್ನೂ ನಿಭಾಯಿಸಿಕೊಂಡು ಉತ್ತಮ ಆಡಳಿತ ನೀಡುತ್ತೇವೆ ಎಂದರು.

ಅವಿರೋಧ ಆಯ್ಕೆ ಕಾರಣಕ್ಕೆ ಎಸ್‌‍. ರವಿ ಆಯ್ಕೆ:
ಅವಿರೋಧವಾಗಿ ಅಪೆಕ್‌್ಸ ಬ್ಯಾಂಕ್‌ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು, ಚುನಾವಣೆ ನಡೆಸುವುದು ಬೇಡ ಎಂಬುದು ನಮ ಪಕ್ಷದ ನಿರ್ಧಾರವಾಗಿತ್ತು. ಹಾಗಾಗಿ ಕೊನೆಯ ಹಂತದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌‍. ರವಿ ಅವರನ್ನು ಆಯ್ಕೆ ಮಾಡಲಾಗಿದೆ. ನಿರ್ಣಾಯಕ ಸಭೆಯಲ್ಲಿ ಕೆ. ಎನ್‌. ರಾಜಣ್ಣ ಅವರೂ ಹಾಜರಿದ್ದರು. ಅವರ ಸಮತಿ ಮೇರೆಗೆ ಅಧ್ಯಕ್ಷರ ಆಯ್ಕೆ ನಡೆದಿದೆ. ಹಾಗಾಗಿ ಈ ವಿಚಾರದಲ್ಲಿ ಅಸಮಾಧಾನದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷರ ಹುದ್ದೆಯ ಕಾಲಾವಧಿಯನ್ನು 2.5-2.5 ವರ್ಷಗಳ ಅಧಿಕಾರ ಸೂತ್ರದಲ್ಲಿ ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಒಂದು ವೇಳೆ ಹೀಗಾದರೆ ಮುಂದೆ ಒಂದು ವೇಳೆ ಕಾಂಗ್ರೆಸ್‌‍ ಅಧಿಕಾರಕ್ಕೆ ಬಾರದಿದ್ದರೆ ಕೆ. ಎನ್‌. ರಾಜಣ್ಣ ಅವರಿಗೆ ಅಧಿಕಾರ ತಪ್ಪಿದಂತಾಗುವುದಿಲ್ಲವೇ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ ಅವರು ಅಪೆಕ್‌್ಸ ಬ್ಯಾಂಕ್‌ ಸ್ವತಂತ್ರ ಹಾಗೂ ಪಕ್ಷಾತೀತ ಸಂಸ್ಥೆಯಾಗಿದೆ. ಅದರ ಆಡಳಿತ ಮಂಡಳಿಯ ನಿರ್ದೇಶಕರು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಮಾಜಿ ಯೋಧರಿಗೂ ನಿವೇಶನ:
ವಸತಿ ರಹಿತರಿಗಾಗಿ ಪ್ರತಿ ಜಿಲ್ಲೆಗೆ 30X40 ಅಡಿ ಅಳತೆಯ 30X50 ಅಳತೆಯಂತೆ ಸಾವಿರ ನಿವೇಶನಗಳನ್ನು ಹಂಚಿಕೆ ಮಾಡುವ ಯೋಜನೆಯಡಿ ಮಾಜಿ ಯೋಧರಿಗೂ ನಿವೇಶನ ನೀಡಲಾಗುವುದು. ಮೊದಲ ಹಂತದಲ್ಲಿ ಮುಂದಿನ ಎರಡು ತಿಂಗಳಲ್ಲಿ ರಾಜ್ಯಾದ್ಯಂತ 5 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದರು.

ಔಪಚಾರಿಕ ಭೇಟಿ ಅಷ್ಟೇ : ಸಿದ್ದರಾಮಯ್ಯ ಸ್ಪಷ್ಟನೆ
ನವದೆಹಲಿ, ಸೆ.11- ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಔಪಚಾರಿಕವಾಗಿ ಭೇಟಿ ಮಾಡಿದ್ದು, ಇದರಲ್ಲಿ ಯಾವುದೇ ರಾಜಕೀಯ ಉದ್ದೇಶಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ರಾಹುಲ್‌ ಗಾಂಧಿಯವರ ಭೇಟಿಗಾಗಿ ಸಮಯ ಕೇಳಿದ್ದೆ, ಈಗ ಸಮಯ ಸಿಕ್ಕಿದೆ. ಇದರಲ್ಲಿ ವಿಶೇಷಗಳೇನೂ ಇಲ್ಲ. ಔಪಚಾರಿಕ ಭೇಟಿ ಹಾಗೂ ಉಭಯ ಕುಶಲೋಪರಿಗಳ ವಿಚಾರಣೆ ಅಷ್ಟೆ ಎಂದು ಹೇಳಿದರು.
ಅನಗತ್ಯ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

RELATED ARTICLES
spot_img

Latest News