ಬೆಂಗಳೂರು,ಅ.28- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಲ್ಪವಾದರೂ ಗೌರವ ಇದ್ದರೆ ತಕ್ಷಣವೇ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಹಿರಂಗ ಸವಾಲು ಹಾಕಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎರಡು ಶಿಕ್ಷಕರು ಹಾಗೂ ಎರಡು ಪದವೀಧರ ಕ್ಷೇತ್ರಗಳ ಫಲಿತಾಂಶ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಅವರಿಗೆ ಗೌರವ ಇದ್ದರೆ ಒಂದು ಕ್ಷಣವೂ ಕೂಡ ತಡ ಮಾಡದೆ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಜನದೇಶ ಪಡೆಯಲಿ ಎಂದು ಸವಾಲು ಎಸೆದರು.
ಈ ಸರ್ಕಾರ ಮುಂದುವರಿಯಲು ನೈತಿಕ ಹಕ್ಕಿಲ್ಲ. ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಲಿ. ಜನರ ಬಳಿಗೆ ಹೋಗೋಣ, ಜನರ ತೀರ್ಪು ಏನೆಂಬುದನ್ನು ನೋಡೋಣ. ಇಷ್ಟು ದೊಡ್ಡ ಅಂತರದಲ್ಲಿ ಗೆದ್ದಿರುವಾಗ ಯಾವ ಮುಖ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರಿಯುತ್ತೀರಿ? ಎಂದು ಯಡಿಯೂರಪ್ಪ ಪ್ರಶ್ನಿಸಿದರು.
ಮುಖ್ಯಮಂತ್ರಿ ಅವರು ತಮೊಂದಿಗೆ ಜನರ ಬಳಿಗೆ ಬರಲಿ. ಜನರ ತೀರ್ಪನ್ನು ಎದುರಿಸಲಿ ಎಂದು ಸವಾಲು ಹಾಕಿದ ಅವರು, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಸರ್ಕಾರದ ವಿರುದ್ಧದ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರತಿಪಾದಿಸಿದರು.
ಈ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆದಿದ್ದು, ಇವಿಎಂ ಬಳಕೆಯಾಗಿರಲಿಲ್ಲ ಎಂದು ಹೇಳಿದರು. ಇದು ಶಿಕ್ಷಕರು ಮತ್ತು ಪದವೀಧರರ ಚುನಾವಣೆ. ಕಳೆದ ಬಾರಿ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಕಾಂಗ್ರೆಸ್ ಮತಗಳ್ಳತನದ ಕುರಿತು ವ್ಯಾಪಕ ಪ್ರಚಾರ ಮಾಡಿತ್ತು. ಆದರೆ, ಈ ಬಾರಿಯ ಫಲಿತಾಂಶದಲ್ಲಿ ಕಾಂಗ್ರೆಸ್ಗೆ ಮತದಾರರು ತಿರಸ್ಕಾರದ ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದರು.
ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು, ಸರ್ಕಾರದ ವಿರುದ್ಧದ ಜನರ ಆಕ್ರೋಶಕ್ಕೆ ಸಾಕ್ಷಿಯಾಗಿದೆ. ಈ ಬಾರಿ ಮತದಾನ ಪ್ರಮಾಣ ಹೆಚ್ಚಿರುವುದು ಕಾಂಗ್ರೆಸ್ ವಿರೋಧಿ ಅಲೆಯನ್ನು ಪ್ರತಿಬಿಂಬಿಸುತ್ತದೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಕಳೆದ ಮೂರೂವರೆ ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ ಯಡಿಯೂರಪ್ಪ, ಭ್ರಷ್ಟಾಚಾರ, ಬೆಲೆ ಏರಿಕೆ, ರೈತರ ಆತಹತ್ಯೆಗಳು ಹಾಗೂ ಬರ ನಿರ್ವಹಣೆಯಲ್ಲಿನ ವೈಫಲ್ಯವನ್ನು ಪ್ರಸ್ತಾಪಿಸಿದರು. ಸುಮಾರು 3,500 ರೈತರು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಅಂಗವಿಕಲರಿಗೆ ಮಾಸಾಶನ ನೀಡುವ ವಿಚಾರದಲ್ಲಿಯೂ ಸರ್ಕಾರದ ವಿರುದ್ಧ ಟೀಕೆ ಮಾಡಿದರು.
ಕಬ್ಬು ಬೆಳೆಗಾರರ ಸಭೆಯಲ್ಲಿ ರೈತರಿಗೆ ಹಣ ಎಲ್ಲಿಂದ ತಂದು ಕೊಡಲಿ ಎಂದು ಮುಖ್ಯಮಂತ್ರಿ ಕೇಳಿರುವುದು ಸರ್ಕಾರದ ಆರ್ಥಿಕ ಸ್ಥಿತಿಯನ್ನು ತೋರಿಸುತ್ತದೆ ಎಂದು ಯಡಿಯೂರಪ್ಪ ಹೇಳಿದರು. ಜನರು ಕಟ್ಟಿದ ತೆರಿಗೆ ಹಣ ಎಲ್ಲಿಗೆ ಹೋಗಿದೆ ಎಂಬುದಕ್ಕೆ ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಆಗ್ರಹಿಸಿದರು.
ಕೆ.ಎಂ.ಸುರೇಶ, ಸಂಕನೂರು, ಶಶಿಲ್ ಜಿ. ನಮೋಶಿ ಹಾಗೂ ಎ.ಪಿ. ರಂಗನಾಥ ಅವರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಿಕ್ಷಕರು, ಪದವೀಧರರು ಸೇರಿದಂತೆ ಪ್ರಜ್ಞಾವಂತ ಮತದಾರರು ತಮ ತೀರ್ಪು ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ಗೋಪಾಲಯ್ಯ, ನೂತನ ವಿಧಾನ ಪರಿಷತ್ ಸದಸ್ಯರಾದ ಕೆ.ಎಂ. ಸುರೇಶ ಮತ್ತು ಎ.ಪಿ. ರಂಗನಾಥ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಹಾಗೂ ಪ್ರಕೋಷ್ಠ ಸಂಚಾಲಕ ದತ್ತಾತ್ರಿ ಉಪಸ್ಥಿತರಿದ್ದರು.
