ಬೆಂಗಳೂರು, ಮಾ.24-ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಸಿಎಂ ಸಿದ್ದರಾಮಯ್ಯ ಅವರ ನಿರ್ಲಜ್ಜತೆ, ಭಂಡತನಕ್ಕೆ ಅವರೇ ಸಾಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್ ಮಾಡಿರುವ ಅವರು, ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.
ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ಹದಯ ವೈಶಾಲ್ಯವಿರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಗುತಿತ್ತು. ಆದರೆ ಕನ್ನಡಿಗರು ನತದೃಷ್ಟ ರು. ಕೇರಳದವರಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ಕುಹಕವಾಡಿದ್ದಾರೆ.
2025-26ನೇ ಹಣಕಾಸು ವರ್ಷದಲ್ಲಿ ಬಜೆಟ್ ಹೊರತಾಗಿ ವೆಚ್ಚ ಮಾಡಿರುವ ಮತ್ತು ಮಾಡಲಾಗುವ 14,767 ಕೋಟಿ ರೂ. ಮೊತ್ತದ 3ನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜಿನಲ್ಲಿ ವಯನಾಡಿನ ಮುಪ್ಪಾಡಿಯಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಮತ್ತೊಮೆ 10 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ಕಡೆ ನಮದೇ ರಾಜ್ಯದಲ್ಲಿ ಕಸ ವಿಲೇವಾರಿ ಮಾಡುವ ಸಂಸ್ಥೆಗಳಿಗೆ, ಸರ್ಕಾರಿ ನೌಕರರ ಸಂಬಳಕ್ಕೆ, ಗುತ್ತಿದೆಗಾರರ ಬಾಕಿ ಪಾವತಿ ಮಾಡಲು ಹಣವಿಲ್ಲ. ಸರ್ಕಾರಿ ಶಾಲೆಗಳ ದುರಸ್ತಿಗೆ, ಸರಿಯಾದ ಸಮಯಕ್ಕೆ ಮಕ್ಕಳ ಪಠ್ಯಪುಸ್ತಕ, ಯುನಿಫಾರ್ಮ್, ಶೂ, ಸ್ಸ್‌ಾ ನೀಡಲು ದುಡ್ಡಿಲ್ಲ. ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ, ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳ ಬಿಲ್ ಪಾವತಿಗೆ ಹಣವಿಲ್ಲ. ಶಾಸಕರಿಗೆ ಅನುದಾನವಿಲ್ಲ ಎಂದು ಅಶೋಕ್ ಆರೋಪಿಸಿದ್ದಾರೆ.
