Homeರಾಜಕೀಯಸ್ಟಿಂಗ್‌ ಆಪರೇಷನ್‌ ವಿಚಾರ : ಎಚ್‌ಡಿಕೆಗೆ ಸಚಿವ ಚಲುವರಾಯಸ್ವಾಮಿ ಸವಾಲು

ಸ್ಟಿಂಗ್‌ ಆಪರೇಷನ್‌ ವಿಚಾರ : ಎಚ್‌ಡಿಕೆಗೆ ಸಚಿವ ಚಲುವರಾಯಸ್ವಾಮಿ ಸವಾಲು

ಬೆಂಗಳೂರು, ಅ.14- ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿದ್ದು, ಸ್ಟಿಂಗ್ ಆಪರೇಷನ್‌ ವಿಚಾರವನ್ನು ಸಿಬಿಐ ತನಿಖೆಗೆ ವಹಿಸುವಂತೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ. ಬೇಕಿದ್ದರೆ ತನಿಖೆ ಮಾಡಿಸಲಿ. ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಲ್ಲಿ ಏನು ಚರ್ಚೆಯಾಗುತ್ತದೆ ಎಂಬುದನ್ನು ಕಾದು ನೋಡೋಣ. ಈ ವಿಚಾರದಲ್ಲಿ ತನಿಖೆಯ ಅಗತ್ಯವಿಲ್ಲ ಎನಿಸುತ್ತದೆ. ಆದರೆ, ಮುಖ್ಯಮಂತ್ರಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ಅವರು ಬೆಳೆದು ಬಂದ ಹಾದಿ ನಾಡಿನ ಜನರಿಗೆ ತಿಳಿದಿದೆ. ಅವರು ಮುಖ್ಯಮಂತ್ರಿಯಾದಾಗ ಪ್ರಸ್ತಾಪವಾಗದ ವಿಚಾರ ಈಗ ಏಕೆ ಮುನ್ನೆಲೆಗೆ ಬಂದಿದೆ? ನಮ್ಮ ಪಕ್ಷದಲ್ಲಿ ಒಡಕು ಮೂಡಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕುಮಾರಸ್ವಾಮಿ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡಲಿ. ನಮಗೆ ಸಲಹೆಗಳನ್ನು ನೀಡಲಿ, ರೈತರ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲಿ. ಸ್ಟಿಂಗ್ ಆಪರೇಷನ್‌ ವಿಚಾರ ಜನರಿಗೆ ಬೇಕಿದೆಯೇ? ಅಗತ್ಯವಿದ್ದರೆ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಸಿಬಿಐ ಅಥವಾ ಸಿಐಡಿ ಸೇರಿದಂತೆ ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಬಹುದು. ಕುಮಾರಸ್ವಾಮಿ ಅವರಿಗೆ ಅಧಿಕಾರ ಬೇಕಿದೆ. ಅದಕ್ಕಾಗಿ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ದೂರಿದರು.

RELATED ARTICLES
spot_img

Latest News