Homeರಾಜಕೀಯನಾಗೇಂದ್ರ ರಾಜೀನಾಮೆ ಕೇಳಲು ಬಿಜೆಪಿಯವರು ಯಾರು..?: ಪ್ರಿಯಾಂಕ್‌ ಖರ್ಗೆ

ನಾಗೇಂದ್ರ ರಾಜೀನಾಮೆ ಕೇಳಲು ಬಿಜೆಪಿಯವರು ಯಾರು..?: ಪ್ರಿಯಾಂಕ್‌ ಖರ್ಗೆ

Who is the BJP to ask for Nagendra's resignation?: Priyank Kharge

ಬೆಂಗಳೂರು, ಆ.21- ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಲು ಬಿಜೆಪಿಯವರು ಯಾರು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವಿಚಾರದ ಬಗ್ಗೆ ಸದನದಲ್ಲಿ ಚರ್ಚೆ ನಡೆಯಬೇಕು ಹಾಗೂ ಆರೋಪಗಳು ಸಾಬೀತಾಗಬೇಕು. ಅದನ್ನು ಬಿಟ್ಟು ಏಕಾಏಕಿ ರಾಜೀನಾಮೆ ಕೇಳಲಾಗುತ್ತಿದೆ. ಈ ರೀತಿಯ ತೀರ್ಮಾನಕ್ಕೆ ಬರಲು ಬಿಜೆಪಿಯವರು ಹೈಕೋರ್ಟ್‌ ಅಥವಾ ಸುಪ್ರೀಂಕೋರ್ಟ್‌ನವರೇ ಎಂದು ಕಿಡಿಕಾರಿದರು.

ಅಸ್ಸಾಂ ಮತ್ತು ಬಿಹಾರದ ಮುಖ್ಯಮಂತ್ರಿಗಳು ಬಿಜೆಪಿಯವರಲ್ಲವೇ? ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ಹಾಗೂ ಹಲವು ಆರೋಪಗಳಿಲ್ಲವೇ ಎಂದು ಪ್ರಶ್ನಿಸಿದ ಪ್ರಿಯಾಂಕ್‌ ಖರ್ಗೆ, ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಲುಕಿ ಬಂಧನಕ್ಕೊಳಗಾಗಿದ್ದ ಶಾಸಕ ಚಂದ್ರು ಲಮಾಣಿ ಕೂಡ ಬಿಜೆಪಿಯವರಲ್ಲವೇ? ಈವರೆಗೂ ಅವರನ್ನು ಪಕ್ಷದಲ್ಲಿ ಉಳಿಸಿಕೊಂಡಿರುವುದು ಏಕೆ ಎಂದು ಪ್ರಶ್ನಿಸಿದರು.

ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ನಾಗೇಂದ್ರ ಅವರ ಹೆಸರನ್ನು ಎರಡನೇಬಾರಿ ಎಫ್‌ ಐ ಆರ್‌ ದಾಖಲಿಸಿ ಸೇರ್ಪಡೆ ಮಾಡಿದ್ದಾರೆ. ಇದನ್ನು ನೋಡಿದರೆ ಇದರ ಹಿಂದಿರುವ ರಾಜಕೀಯ ಉದ್ದೇಶ ಅರ್ಥವಾಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಬಿಜೆಪಿಯವರಿಗೆ ಧೈರ್ಯವಿದ್ದರೆ ಚರ್ಚೆಗೆ ಬರಲಿ. ಸಚಿವ ನಾಗೇಂದ್ರ ಅವರ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ಸದನದಲ್ಲಿ ಸಾಬೀತುಪಡಿಸಲಿ ಎಂದು ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದರು.

RELATED ARTICLES
spot_img

Latest News