Thursday, April 16, 2026
Homeರಾಜಕೀಯರಸ್ತೆ, ಚರಂಡಿ ಬೇಡ ಅಂದವರಿಗೆ ತುಮಕೂರಿಗೆ ಮಾತ್ರ ಮೆಟ್ರೋ ಏಕೆ ಬೇಕು..? : ಆರ್‌.ಅಶೋಕ ಪ್ರಶ್ನೆ

ರಸ್ತೆ, ಚರಂಡಿ ಬೇಡ ಅಂದವರಿಗೆ ತುಮಕೂರಿಗೆ ಮಾತ್ರ ಮೆಟ್ರೋ ಏಕೆ ಬೇಕು..? : ಆರ್‌.ಅಶೋಕ ಪ್ರಶ್ನೆ

R Ashok

ಬೆಂಗಳೂರು,ಡಿ.16- ರಸ್ತೆ, ಚರಂಡಿ ಬೇಡ ಅಂದವರಿಗೆ ತುಮಕೂರಿಗೆ ಮಾತ್ರ ಮೆಟ್ರೋ ಯಾಕೆ ಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದ್ದಾರೆ. ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರಾ? ಎಂದು ಪರಮೇಶ್ವರ್‌ ಮಾತಿಗೆ ವಿಪಕ್ಷಗಳು ವಿರೋಧ ವ್ಯಕ್ತ್ತಪಡಿಸಿದ್ದು, ಗೃಹ ಸಚಿವರ ಮಾತು ಸರಿಯೇ? ಎಂಬ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಬಗ್ಗೆ ಆರ್‌.ಅಶೋಕ ಟ್ವೀಟ್‌ ಮೂಲಕವೇ ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರ ನಡೆಸುವುದು, ಅಭಿವೃದ್ಧಿ ಮಾಡುವುದು ಅಂದರೆ 3 ತಿಂಗಳಿಗೋ, 6 ತಿಂಗಳಿಗೋ ಒಮೆ ಗೃಹಲಕ್ಷ್ಮಿ ಹಣ ಅಕೌಂಟಿಗೆ ಹಾಕೋದು, ಬಾಕಿ ಸಮಯದಲ್ಲಿ ರಾಜಕೀಯ ಮಾಡೋದು, ಕುರ್ಚಿಗಾಗಿ ಕಿತ್ತಾಡೋದು ಅಂದುಕೊಂಡಿದ್ದಾರೆ ಕಾಂಗ್ರೆಸ್‌‍ ನಾಯಕರು. ರಸ್ತೆ, ಚರಂಡಿ, ಮೂಲಸೌಕರ್ಯ ನಿರ್ಮಾಣದಿಂದ ಬಡವರು ಉದ್ಧಾರ ಆಗಿಲ್ಲ ಎನ್ನುವ ಮನಸ್ಥಿತಿ ಇರುವ ಕಾಂಗ್ರೆಸ್‌‍ ಸರ್ಕಾರದಿಂದ ಕರ್ನಾಟಕದ ಜನತೆ ಇನ್ನೇನು ತಾನೇ ನಿರೀಕ್ಷಿಸಲು ಸಾಧ್ಯ? ಎಂದು ವಾಗ್ದಾಳಿ ನಡೆಸಿದ್ದಾರೆ.

ರಸ್ತೆ, ಚರಂಡಿ ಬೇಡ ಎಂದ ಮೇಲೆ, ತುಮಕೂರಿನವರೆಗೂ ಮೆಟ್ರೋ ಏಕೆ ಬೇಕು ಪರಮೇಶ್ವರ್‌ ಅವರೇ ಎಸ್‌‍ ಸಿ, ಎಸ್‌‍ ಪಿ/ಟಿಎಸ್‌‍ ಪಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವಂತೆ, ಮೆಟ್ರೋ ಕಾಮಗಾರಿಯ ಹಣವನ್ನೂ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಬಿಡಿ ಎಂದು ಅವರು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ನಾಲಾಯಕ್‌ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ. ಇದಂತೂ ಗ್ಯಾರೆಂಟಿ. ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರಾ? ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಕೇಳುತ್ತಾರೆ. ಅಲ್ಲಿಗೆ ಉದಯವಾಯಿತು ನಮ ಚೆಲುವ ಕನ್ನಡ ನಾಡು! ಎಂದು ವ್ಯಂಗ್ಯವಾಡಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು? ತುಮಕೂರಿನಲ್ಲಿ ಭಾನುವಾರ ನಡೆದ ಬಂಜಾರ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ರಸ್ತೆ ಮತ್ತು ಚರಂಡಿಗಳ ನಿರ್ಮಾಣದಿಂದ ಜನಸಮೂಹ ಉದ್ದಾರವಾಗುತ್ತದೆಯೇ? ಬಡವರ ಜೀವನ ಉದ್ದಾರವಾಗುತ್ತಾ ಎಂದು ಪ್ರಶ್ನಿಸಿದ್ದರು. ರಸ್ತೆ, ಚರಂಡಿ ಅಥವಾ ಇನ್ನಿತರ ಕಾರ್ಯಕ್ರಮಗಳಿಂದ ಮಾತ್ರ ಬಡವರ ಜೀವನದಲ್ಲಿ ಬದಲಾವಣೆ ಬರೋದಿಲ್ಲ. ಸಾವಿರಾರು ವರ್ಷಗಳ ಶೋಷಣೆಯನ್ನು ಕೊನೆಗಾಣಿಸುವುದು. ಜನರ ಜೀವನವನ್ನು ಸುಧಾರಿಸುವುದೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶ ಎಂದಿದ್ದಾರೆ.

ನಾವು ರಸ್ತೆ, ಮನೆ ನಿರ್ಮಾಣ ಅಥವಾ ನೀರಾವರಿ ಯೋಜನೆಗಳನ್ನು ನಿಲ್ಲಿಸಿಲ್ಲ, ನಿರ್ಮಾಣ ಕಾಮಗಾರಿ ನಿಧಾನವಾಗಿರಬಹುದು. ಆದರೆ, ಅವು ಎಂದಿಗೂ ನಿಲ್ಲುವುದಿಲ್ಲ. ಜನರ ಜೀವನ ಉತ್ತಮಗೊಳ್ಳಬೇಕು ಮತ್ತು ಸುಧಾರಣೆಯಾಗಬೇಕು ಎಂಬ ದೃಷ್ಟಿಯಿಂದಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಗೃಹ ಸಚಿವರು ಹೇಳಿದ್ದರು.

RELATED ARTICLES

Latest News