ಸೋಮವಾರದೊಳಗೆ ಬೂತ್ ಮಟ್ಟದ ಏಜೆಂಟರ ಪಟ್ಟಿ ನೀಡುವಂತೆ ಸೂಚನೆ

Social Share

ಬೆಂಗಳೂರು,ಡಿ.24- ಬರುವ ಸೋಮವಾರದೊಳಗೆ ಎಲ್ಲ ರಾಜಕೀಯ ಪಕ್ಷಗಳು ನಗರದ 28 ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಏಜೆಂಟ್‍ಗಳ ಪಟ್ಟಿ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಿಗೆ ನಾವು ಈಗಾಗಲೇ ಬಿಎಲ್‍ಒಗಳನ್ನು ನಿಯೋಜನೆ ಮಾಡಿದ್ದೇವೆ. ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಈ ಕೂಡಲೆ ರಾಜಕೀಯ ಪಕ್ಷಗಳ ಮುಖಂಡರುಗಳು ಬೂತ್ ಮಟ್ಟದ ಏಜೆಂಟರ ಪಟ್ಟಿ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಕುರಿತು ರಾಜಕೀಯ ಪ್ರತಿನಿಧಿಗಳ ಜೊತೆ ಪ್ರತಿ ವಾರವೂ ಜಿಲ್ಲಾ ಒಂದು ಸಭೆ ನಡೆಸಲಾಗುವುದು, ಇದರ ಜೊತೆಗೆ ಆಯಾ 28 ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಅಪರ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಪ್ರತಿ 3 ದಿನಕ್ಕೊಮ್ಮೆ ರಾಜಕೀಯ ಪಕ್ಷಗಳ ಕಛೇರಿಯ ಇ-ಮೇಲ್ ಐಡಿ ಗೆ ಕಳುಹಿಸಿಕೊಡಲಾಗುವುದು. ಇನ್ನೂ ಹೆಚ್ಚಿನ ಇ-ಮೇಲ್ ಐಡಿಗೆ ಕಳುಹಿಸಿಕೊಡಬೇಕಾದರೆ ರಾಜಕೀಯ ಪಕ್ಷಗಳಿಂದ ಅಧಿಕೃತ ಇ-ಮೇಲ್ ಐಡಿ ಎಂದು ದೃಢೀಕರಿಸಿಕೊಂಡು ಪಾಲಿಕೆಗೆ ಸಲ್ಲಿಸಿದರೆ ಅದಕ್ಕೂ ವಿವರಗಳನ್ನು ಕಳುಹಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

ಚಿಲುಮೆ ಅಕ್ರಮ ಪ್ರಕರಣ : ಇಬ್ಬರು IAS ಅಧಿಕಾರಿಗಳ ಅಮಾನತು ವಾಪಸ್

ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ನೇಮಿಸಿರುವ ಬಿಎಲ್‍ಒಗಳ ಪಟ್ಟಿಯನ್ನು ಬಿಬಿಎಂಪಿ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಇದರ ಜೊತೆಗೆ ಅವರ ದೂರವಾಣಿ ಸಂಖ್ಯೆಯನ್ನು ನೀಡಲಾಗಿದ್ದು, ಅವರನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.

28 ವಿಧಾನ ಸಭಾ ಕ್ಷೇತ್ರಗಳಲ್ಲಿ ನೂಮೂನೆಗಳ ವಿಲೇವಾರಿ ಮಾಡಿರುವ, ಮನೆ ಮನೆ ಸಮೀಕ್ಷೆ ನಡೆಸುತ್ತಿರುವ, ಬೂತ್ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿರುವ, ಚಿಕ್ಕಪೇಟೆ-ಶಿವಾಜಿನಗರ-ಮಹದೇವಪುರ ವ್ಯಾಪ್ತಿಯಲ್ಲಿ ಸೇರ್ಪಡೆ ಹಾಗೂ ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ, ಮತದಾನ ಗುರುತಿನ ಚೀಟಿ ವಿತರಣೆ ಸೇರಿದಂತೆ ಇನ್ನಿತರೆ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಅಯ್ಯಪ್ಪನ ದರ್ಶನ ಮಾಡಿ ವಾಪಸ್ಸಾಗುತ್ತಿದ್ದಾಗ ವಾಹನ ಅಪಾಘಾತ, 8 ಭಕ್ತರ ಸಾವು

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಆಡಳಿತ ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್, ಜಿಲ್ಲಾಧಿಕಾರಿ ದಯಾನಂದ, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷದ ಪ್ರತಿನಿಧಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

political parties, booth level, agents, BBMP, Election,

Articles You Might Like

Share This Article