Sunday, December 1, 2024
Homeರಾಜ್ಯಜನತಾ ದರ್ಶನ ವಿಚಾರದಲ್ಲೂ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ : ಹೆಚ್‌ಡಿಕೆ

ಜನತಾ ದರ್ಶನ ವಿಚಾರದಲ್ಲೂ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ : ಹೆಚ್‌ಡಿಕೆ

ಬೆಂಗಳೂರು, ಜು.5-ಜನತಾ ದರ್ಶನ ನಡೆಸುವ ವಿಚಾರದಲ್ಲೂ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಡೆಸುವ ಜನತಾ ದರ್ಶನದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಅಧಿಕಾರಿಗಳನ್ನು ನನ್ನಿಂದ ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರವಿಡಲು ನಿಮಿಂದ ಸಾಧ್ಯವಿಲ್ಲ ಎಂದು ರಾಜ್ಯದ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜನತಾ ದರ್ಶನ ನಡೆಸುವುದನ್ನು ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಡೆಸುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಈ ರೀತಿಯ ಸಭೆ ನಡೆಸಿದಾಗ ಏನು ಮಾಡುತ್ತಿದ್ದರು? ಚುನಾವಣೆ ಸಂದರ್ಭದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ದರು ಎಂದು ಟೀಕಾಪ್ರಹಾರ ನಡೆಸಿದ್ದಾರೆ.

RELATED ARTICLES

Latest News