ವಿಶ್ವದ ಅತಿದೊಡ್ಡ ಚುನಾವಣಾ ಹಬ್ಬ ಆರಂಭ, ಮೊದಲ ಹಂತದ ಲೋಕಸಭಾ ಚುನಾವಣೆಗೆ ಅಧಿಸೂಚನೆ ಜಾರಿ

ನವದೆಹಲಿ,ಮಾ.20- ಜಾಗತಿಕವಾಗಿ ಕುತೂಹಲ ಕೆರಳಿಸಿರುವ ದೇಶದ ಲೋಕಸಭೆ ಚುನಾವಣೆಗೆ ಇಂದಿನಿಂದ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಜಾರಿಯಾಗಿದೆ.21 ರಾಜ್ಯಗಳ 102 ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಮಾ.27 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮಾ.28 ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಮಾ.30 ಕೊನೆಯ ದಿನವಾಗಿದೆ. ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶದ 2, ಅಸ್ಸಾಂನ 5, ಬಿಹಾರದ 4, ಛತ್ತೀಸ್ಘಡದ 1, ಮಧ್ಯಪ್ರದೇಶದ … Continue reading ವಿಶ್ವದ ಅತಿದೊಡ್ಡ ಚುನಾವಣಾ ಹಬ್ಬ ಆರಂಭ, ಮೊದಲ ಹಂತದ ಲೋಕಸಭಾ ಚುನಾವಣೆಗೆ ಅಧಿಸೂಚನೆ ಜಾರಿ