Thursday, December 12, 2024
Homeರಾಷ್ಟ್ರೀಯ | Nationalಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ

ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ

ನವದೆಹಲಿ,ಮಾ.16- ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದೆ. ವಿಕಲಚೇತನರು ಹಾಗೂ ಹಿರಿಯ ಮತದಾರರು ಫಾರಂ 12 ಡಿ ಬಳಕೆ ಮಾಡಿ ಮನೆಯಿಂದಲೇ ಮತ ಚಲಾಯಿಸಬಹುದಾಗಿದೆ ಎಂದು ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ಪ್ರಕಟಿಸಿದರು.

ಇದಲ್ಲದೆ ಮತಗಟ್ಟೆಗೆ ಮತ ಚಲಾಯಿಸಲು ಬರುವ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ವೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದನ್ನು ಮತದಾರರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಆಯುಕ್ತರು ಮನವಿ ಮಾಡಿಕೊಂಡರು.80 ವರ್ಷ ಮೇಲ್ಪಟ್ಟವರು 1.98 ಕೋಟಿ ಹಾಗೂ 88 ಲಕ್ಷ ವಿಕಲಚೇತನ ಮತದಾರರಿದ್ದಾರೆ. ಮತಗಟ್ಟೆಗಳಲ್ಲಿ ನೀರು ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಲಿದ್ದು, ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಅವರು ತಿಳಿಸಿದರು.

ಚುನಾವಣೆಯಲ್ಲಿ ಸ್ರ್ಪಸುವ ಅಭ್ಯರ್ಥಿಗಳ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಸ್ರ್ಪಸುವ ಎಲ್ಲಾ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಪ್ರಕರಣಗಳ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.

RELATED ARTICLES

Latest News