ಮುಂಬೈ,ಫೆ.3- ಸ್ವಯಂ ಸಾವಿನ ಸುದ್ದಿ ಹರಿಯಬಿಟ್ಟು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಇಂದು ದಿಢೀರ್ ಪ್ರತ್ಯಕ್ಷವಾಗಿ ನಾನು ಬದುಕಿದ್ದೇನೆ ಎಂದು ಹೇಳಿದ್ದಾರೆ. ಜೊತೆಗೆ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.
ನಿನ್ನೆ ಇದ್ದಕ್ಕಿದ್ದಂತೆ ಸುದ್ದಿಯೊಂದು ಹರಿದಾಡಿದ್ದು, ಉತ್ತರಪ್ರದೇಶದಲ್ಲಿ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂತು. ಹಲವು ಗೊಂದಲಗಳ ನಡುವೆಯೇ ಪೂನಂ ಪಾಂಡೆ ಅವರ ಇನ್‍ಸ್ಟ್ರಾಗ್ರಾಂ ಖಾತೆಯಲ್ಲಿ ಇಂದು ಬೆಳಗ್ಗೆ ಪೂನಂ ಪಾಂಡೆ ನಿಧನರಾಗಿದ್ದಾರೆ. ಅವರ ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ಮಾಡಬಾರದು ಎಂಬ ಪೋಸ್ಟ್ ಕಾಣಿಸಿಕೊಂಡಿತ್ತು. ಮಧ್ಯಾಹ್ನದ ವೇಳೆಗೆ ಪೂನಂ ಪಾಂಡೆ ಅವರ ಖಾತೆಯಲ್ಲಿ ಸಾವಿನ ಸುದ್ದಿಯನ್ನು ತಾವೇ ಪೋಸ್ಟ್ ಮಾಡಿದ್ದಾಗಿ ಆಕೆಯ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದರು.
ಪಾಕ್ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದ ಹಿಂದೂಗಳು
ಇದನ್ನು ಮಾಧ್ಯಮಗಳು, ಪತ್ರಿಕೆಗಳು ನಂಬಿ ಸುದ್ದಿ ಬಿತ್ತರಿಸಿದ್ದಲ್ಲದೆ ಗರ್ಭಕಂಠ ಕ್ಯಾನ್ಸರ್‍ನ ಲಕ್ಷಣಗಳು, ಅಪಾಯಗಳು ಮತ್ತು ನಿಯಂತ್ರಣದ ಮಾಹಿತಿ ಕುರಿತು ಚರ್ಚೆಯನ್ನು ನಡೆಸಿದ್ದರು. ಇಂದು ಇದ್ದಕ್ಕಿದ್ದಂತೆ ತಮ್ಮ ಇನ್‍ಸ್ಟ್ರಾ ಖಾತೆಯಲ್ಲಿ 12 ಗಂಟೆ ಸುಮಾರಿಗೆ ಕಾಣಿಸಿಕೊಂಡ ಪೂನಂ ಪಾಂಡೆ, ನಾನು ಬದುಕಿದ್ದೇನೆ ಎಂದು ಘೋಷಿಸಿದ್ದಾರೆ.
ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಪೂನಂ ಪಾಂಡೆ ಈ ವಿಭಿನ್ನ ವಿಧಾನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪೂನಂ ಪಾಂಡೆ ಮನರಂಜನಾ ಉದ್ಯಮದಲ್ಲಿನ ಕೆಲಸಕ್ಕಾಗಿ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ತನ್ನ ರೋಮಾಂಚಕ ಉಪಸ್ಥಿತಿಗಾಗಿಯೂ ಹೆಸರುವಾಸಿಯಾಗಿದ್ದಾಳೆ.
ಇದೀಗ ಪೂನಂ ಬದುಕಿರುವ ಸುದ್ದಿಯನ್ನು ಸ್ವತಃ ಪೂನಂ ಅವರೇ ನೀಡಿದ್ದಾರೆ. ತಾನು ಬದುಕಿದ್ದೇನೆ. ಹಾಗೆ ಮಸೇಜ್ ಮಾಡಲು ಕಾರಣವಿದೆ. ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಬೇಕಿತ್ತು. ಹಾಗಾಗಿ ಈ ಪೋಸ್ಟ್ ಮಾಡಲಾಯಿತು. ದಯವಿಟ್ಟು ಈ ಕ್ಯಾನ್ಸರ್ ಕುರಿತಂತೆ ಜಾಗೃತ ವಹಿಸಿ ಎಂದು ಪೂನಂ ವಿಡಿಯೋ ಮೂಲಕ ಹೇಳಿದ್ದಾರೆ.
ಪೂನಂ ಬದುಕಿರುವ ಸಮಾಚಾರ ತಿಳಿದು ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ಜಗತ್ತನ್ನೇ ಫೂಲ್ ಮಾಡಿದ ಪೂನಂರನ್ನು ಕೆಲವರು ತರಾಟೆಗೂ ತೆಗೆದುಕೊಂಡಿದ್ದಾರೆ. ಏನೇ ಇರಲಿ. ಈ ಮಾರ್ಗದ ಮೂಲಕ ಜಾಗೃತಿ ಮೂಡಿಸುವುದು ತರವಲ್ಲ ಎಂಬುದು ಅನೇಕರ ಅಭಿಪ್ರಾಯವಾಗಿದೆ.