8 ಕೆಜಿ ತೂಕದ ಹಂದಿ ಚಿಪ್ಪು ವಶ

Spread the love

ಬೆಂಗಳೂರು , ಅ.22- ಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಬಂದಿದ್ದ ಬಳ್ಳಾರಿ ಮೂಲದ ಇಬ್ಬರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ 8 ಕೆ.ಜಿ. 200 ಗ್ರಾಂ ತೂಕದ ಹಂದಿ ಚಿಪ್ಪುಗಳನ್ನು ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯ ಸಂಡೂರು ನಿವಾಸಿಗಳಾದ ಇಬ್ರಾಹಿಂ ಮತ್ತು ಮರಿಸ್ವಾಮಿ ಬಂಧಿತ ಆರೋಪಿಗಳು.

ಇವರಿಬ್ಬರು ಕಾನೂನು ಬಾಹಿರವಾಗಿ ಅಳಿವಿನ ಅಂಚಿನಲ್ಲಿರುವ ಚಿಪ್ಪು ಹಂದಿಯ ಚಿಪ್ಪುಗಳನ್ನು ಸಂಗ್ರಹಿಸಿಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪಿಎಸ್‍ಐ ಅವರಿಗೆ ಲಭಿಸಿದೆ.

ಖಚಿತ ಮಾಹಿತಿ ಮೇರೆಗೆ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ ಹಂದಿಯ ಚಿಪ್ಪುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Facebook Comments