Monday, November 25, 2024
Homeರಾಜ್ಯ2ನೇ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ

2ನೇ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ

ಬೆಂಗಳೂರು, ಏ.30- ಮೇ 7ರಂದು ಮತದಾನ ನಡೆಯುವ ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ ಮೂರು ದಿನಗಳ ಕಾಲ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರತಗಳಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ನಾಳೆಯಿಂದ ಮೇ 3ರವರೆಗೆ ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಅಂಚೆ ಮತದಾನ ಮಾಡಬಹುದಾಗಿದೆ.

ಅಗತ್ಯ ಸೇವೆಗಳ ಇಲಾಖೆಗಳಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಳಾಖೆಗಳ ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗ ಅಂಚೆ ಮತದಾನ ಕೇಂದ್ರಗಳನ್ನು ತೆರೆದಿದ್ದು, ಅರ್ಹ ಮತದಾರರ ಅಂಚೆ ಮತಪತ್ರಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ.

RELATED ARTICLES

Latest News