ಬೆಂಗಳೂರು, ಸೆ. 25- ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪಿಸಿ ಸಿಎಂ ಪೋಸ್ಟರ್ ಅಭಿಯಾನ ನಡೆಸಿದ ಬೆನ್ನಲ್ಲೇ ಕಂದಾಯ ಸಚಿವ ಆರ್. ಅಶೋಕ್ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ.
ಅಶೋಕ್ ಪ್ರತಿನಿಸುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಕೆರೆಗಳನ್ನು ನುಂಗಿದ ಸಾಮ್ರಾಟ್ ಅಶೋಕ್ ಎಂದು ಪೋಸ್ಟರ್ ಅಂಟಿಸಲಾಗಿದೆ. ನಿನ್ನೆ ರಾತ್ರಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಈ ಪೋಸ್ಟರ್‍ಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ : ಮತ್ತೆ ಕಿಮ್ ಕಿತಾಪತಿ, ಕ್ಷಿಪಣಿ ಉಡಾಯಿಸಿ ಉತ್ತರ ಕೊರಿಯಾ ಕಿರಿಕ್
ಇನ್ನಷ್ಟು ಕ್ಷೇತ್ರಗಳಿಗೆ ಈ ರೀತಿಯ ಪೋಸ್ಟರ್‍ಗಳನ್ನು ವಿಸ್ತರಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ ಎನ್ನಲಾಗುತ್ತಿದೆ.ಟ್ವೀಟ್ ಮೂಲಕ ತನ್ನ ಆಕ್ರೋಶ ವ್ಯಕ್ತಪಡಿಸುವ ಕಾರ್ಯವನ್ನು ಕಾಂಗ್ರೆಸ್ ಮುಂದುವರಿಸಿದೆ.