Friday, May 17, 2024
Homeರಾಜ್ಯರೇವಣ್ಣ-ಸಿದ್ದರಾಮಯ್ಯ ನಡುವೆ ಒಪ್ಪಂದ: ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ

ರೇವಣ್ಣ-ಸಿದ್ದರಾಮಯ್ಯ ನಡುವೆ ಒಪ್ಪಂದ: ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ

ಹುಬ್ಬಳ್ಳಿ,ಏ.30- ಮಾಜಿ ಸಚಿವ ಎಚ್‌.ಡಿ. ರೇವಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದ ಇರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಮೇಲೆ ಸರ್ಕಾರ ತಕ್ಷಣ ಎಫ್‌ಐಆರ್‌ ಹಾಕಿಲ್ಲ. ಅಷ್ಟೇ ಅಲ್ಲದೇ ಪ್ರಜ್ವಲ್‌ ಅವರನ್ನು ಓಡಿ ಹೋಗೋಕ್ಕೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಸರ್ಕಾರ ಏಕೆ ಇನ್ನು ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಮತ್ತು ರೇವಣ್ಣ ನಡುವೆ ಒಪ್ಪಂದ ಇರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕೂಡಲೇ ರಾಜ್ಯ ಪೊಲೀಸರು ಸಂಸದ ಪ್ರಜ್ವಲ್‌ ರೇವಣ್ಣನನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನು ಪ್ರಜ್ವಲ್‌ ವಿದೇಶಕ್ಕೆ ಹೋಗಲು ಬಿಜೆಪಿಯವರು ಸಹಾಯ ಮಾಡಿದ್ದಾರೆಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಕೇಂದ್ರಕ್ಕೆ ಏನಾದರೂ ಕನಸು ಬೀಳುತ್ತಾ? ಇವರು ಪ್ರಜ್ವಲ್‌ ಮೇಲೆ ಶೀಘ್ರ ಎಫ್‌ಐಆರ್‌ನ್ನು ದಾಖಲಿಸಿಲ್ಲ ಯಾಕೆ? ಎಫ್‌ಐಆರ್‌ ಆಗುವ ಮುಂಚೆ ಯಾಕೆ ಅರೆಸ್ಟ್ ಮಾಡಲಿಲ್ಲ. ಇದು ಆತ್ಯಂತ ಬೇಜಾವ್ದಾರಿ ಹೇಳಿಕೆ ಎಂದರು.

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಆದರೆ ಈ ಬಗ್ಗೆ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ನಮಗೇನೂ ಎಫೆಕ್ಟ್‌ ಆಗಲ್ಲ, ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಜೆಡಿಎಸ್‌ ಒಂದು ಇಂಡಿಪೆಂಡೆಂಟ್‌ ಪಕ್ಷ. ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡರ ಮೊಮ್ಮಗ ಆಗಿರುವ ಕಾರಣಕ್ಕೆ ಸೂಕ್ಷ್ಮ ವಿಚಾರವಾಗಿದೆ ಎಂದರು.

ನಾಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹುಬ್ಬಳ್ಳಿಗೆ ಬರಲಿದ್ದಾರೆ. ಮೋದಿ ಅವರ ನಂತರ ದೇಶದಲ್ಲಿ ಅತ್ಯಂತ ಹೆಮ್ಮೆಯ ನಾಯಕರು. ಬಿಜೆಪಿ ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ. ಜನರಿಗೆ ಅವರನ್ನು ನೋಡುವ ಕಾತುರ ಇದೆ ಎಂದು ಅವರು ಹೇಳಿದರು.

RELATED ARTICLES

Latest News